ಕುಂದಾಪುರ : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೆಕ್ಕಟ್ಟೆ ಹಾಗೂ ಕುಂಭಾಶಿ ಭಾಗದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಮಾಹಿತಿ ಕಾರ್ಯಗಾರ ಇಂದು ಕುಂಭಾಶಿ ಶ್ರೀ ವಿನಾಯಕ ಸಭಾಗ್ರಹದಲ್ಲಿ ನೆರವೇರಿತು. ಕಾರ್ಯಕ್ರಮದ ಬಗ್ಗೆ ಬಿಜೆಪಿ ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಮಾತನಾಡಿ ಚುನಾವಣಾ ಆಯೋಗದ ನಿಯಮಾವಳಿಗಳನ್ನು ಪಾಲಿಸಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಶಿಸ್ತುಬದ್ಧವಾಗಿ ನಿರ್ವಹಿಸಬೇಕು. ಮೊದಲ ಬಾರಿ ಮತದಾನ ಮಾಡುವ ಯುವ ಜನರ ಹೆಸರನ್ನು ಪಟ್ಟಿಗೆ ಸೇರಿಸಲು ವಿಶೇಷ ಗಮನ ಹರಿಸಬೇಕು. ಒಬ್ಬ ಅರ್ಹ ಮತದಾರನೂ ತಪ್ಪಬಾರದು ಎಂದು ಕಾರ್ಯಕರ್ತರಿಗೆ ಸೂಚಿಸಿದರು.
ಬಿ.ಎಲ್.ಎ-1 ಸಂಚಾಲಕ ರಾಜೇಶ್ ಶೆಟ್ಟಿ ಅವರು ಮಾತನಾಡಿ ಮತದಾರ ಪಟ್ಟಿ ಪರಿಷ್ಕರಣಿಯ ಕಾರ್ಯವೈಖರಿ ಎಲ್ಲ ಕಾರ್ಯಕರ್ತರು ನಿಗದಿತ ಅವಧಿಯೊಳಗೆ ಈ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ನಿಖರ ಮಾಹಿತಿ ನೀಡಬೇಕು ಎಂದು ತಿಳಿಸಿದರು.ಪರಿಷ್ಕರಣೆ ಕಾರ್ಯವನ್ನು ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಅಚ್ಚುಕಟ್ಟಾಗಿ ನಡೆಸಬೇಕು ಹೇಳಿದರು ಕಾರ್ಯಕ್ರಮವನ್ನ ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ವೇತಾ ಶ್ರೀನಿಧಿ ಉಪಾಧ್ಯಾಯ ನಿರೂಪಿಸಿದರು, ಮಂಜುನಾಥ್ ಕಾಮತ್ ವಂದಿಸಿದರು
ಕಾರ್ಯಕ್ರಮದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ. ಮಂಡಲ ಕಾರ್ಯದರ್ಶಿ ನೇತ್ರಾವತಿ ಮಡಿವಾಳ,ತೆಕ್ಕಟ್ಟೆ ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀನಾಥ್ ಶೆಟ್ಟಿ, ಕುಂಭಾಶಿ ಶಕ್ತಿ ಕೇಂದ್ರ ಅಧ್ಯಕ್ಷ ಮಹೇಶ್ ಶೆಣೈ, ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಪಕ್ಷದ ವಿವಿಧ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

