Home » ಜಿಲ್ಲಾ ಬಿಜೆಪಿ ಬೃಹತ್‌ ಪ್ರತಿಭಟನೆ
 

ಜಿಲ್ಲಾ ಬಿಜೆಪಿ ಬೃಹತ್‌ ಪ್ರತಿಭಟನೆ

by Kundapur Xpress
Spread the love

ಉಡುಪಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೊಲೆಗಡುಕರಿಗೆ, ಭಯೋತ್ಪಾದಕರಿಗೆ ಪುಷ್ಠಿ ನೀಡಿದಂತೆ ಎಂಬುದಕ್ಕೆ ಕಾಂಗ್ರೆಸ್ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದ ಎರಡೇ ತಿಂಗಳಲ್ಲಿ ರಾಜ್ಯದಲ್ಲಿ ಜೈನ ಮುನಿ ಮತ್ತು ಹಿಂದೂ ಕಾರ್ಯಕರ್ತನ 2 ಅಮಾನುಷ ಹತ್ಯೆ ನಡೆದಿರುವುದು ಜ್ವಲಂತ ನಿದರ್ಶನವಾಗಿದೆ. ಹಂತಕರಿಗೆ ಕಾನೂನಿನ ಭಯವಿಲ್ಲದೆ ಇಂತಹ ಭೀಕರ ಕೊಲೆಗಳು ನಿರಂತರ ನಡೆಯುತ್ತಿರುವುದು ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ‌ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ್ ರವರ ಅಮಾನುಷ ಹತ್ಯೆಮತ್ತು ಟಿ.ನರಸೀಪುರದಲ್ಲಿ ನಡೆದ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ರವರ ಕೊಲೆಯನ್ನು ಖಂಡಿಸಿ, ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ಮಂಡಲದ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಜೈನ ಮುನಿ ಕೊಲೆ, ಹಿಂದೂ ಕಾರ್ಯಕರ್ತರ ಹತ್ಯೆಯಂತಹ ಸಮಾಜ ಕಂಟಕ ಹೇಯ ಕೃತ್ಯಗಳನ್ನು ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಮಾತ್ರ ನಿರೀಕ್ಷಿಸಲು ಸಾಧ್ಯ. ‘ಅಲ್ಲಾನ ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದೆ’ ಎಂದಿರುವ ಗೃಹ ಸಚಿವ ಪರಮೇಶ್ವರ್ ಹೇಳಿಕೆಯಂತೆ ಕಾಂಗ್ರೆಸ್ ಸರಕಾರ ಈ ಋಣ ತೀರಿಸುವ ನಿಟ್ಟಿನಲ್ಲಿ ಹಿಂದೂ ವಿರೋಧಿ ಕೃತ್ಯ ಎಸಗುತ್ತಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಇದರ ವ್ಯತಿರಿಕ್ತ ಪರಿಣಾಮದ ಫಲ ಉಣ್ಣಲಿದೆ ಎಂದು ಅವರು ಹೇಳಿದರು

ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಶ್ರೀಶ ನಾಯಕ್ ಪೆರ್ಣಂಕಿಲ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯದರ್ಶಿ ರೇಶ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಉಡುಪಿ ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶ ಭಟ್ ಕೊಡವೂರು, ಬಿಜೆಪಿ ಉಡುಪಿ ನಗರ ಉಪಾಧ್ಯಕ್ಷರಾದ ವಿಜಯ ಕೊಡವೂರು, ಕೃಷ್ಣಪ್ಪ ಜತ್ತನ್, ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ, ದಿನೇಶ್ ಅಮೀನ್, ಕಾರ್ಯದರ್ಶಿ ದಯಾಶಿನಿ, ಲಕ್ಷ್ಮೀ ಶೆಟ್ಟಿ, ಕೋಶಾಧಿಕಾರಿ ಸಂತೋಷ್ ಆಚಾರ್ಯ, ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಉಡುಪಿ ನಗರಸಭೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ, ಬಾಲಕೃಷ್ಣ ಶೆಟ್ಟಿ, ನಗರಸಭಾ ಸದಸ್ಯರು, ಮಹಾ ಶಕ್ತಿ ಕೇಂದ್ರಗಳ ಅಧ್ಯಕ್ಷರು, ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

.

   

Related Articles

error: Content is protected !!