Home » ತಾಳ್ಮೆ ಪರೀಕ್ಷಿಸದಿರಿ : ಯಶ್ಪಾಲ್‌ ಎಚ್ಚರಿಕೆ
 

ತಾಳ್ಮೆ ಪರೀಕ್ಷಿಸದಿರಿ : ಯಶ್ಪಾಲ್‌ ಎಚ್ಚರಿಕೆ

by Kundapur Xpress
Spread the love

ಉಡುಪಿ : ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕಾರ್ಯಕರ್ತರು ಸರಕಾರಿ ಸೇವೆಗಾಗಿ ಅಧಿಕಾರಿಗಳ ಬಳಿಗೆ ಹೋದರೆ ಅವರನ್ನು ಕಡೆಗಣಿಸಲಾಗುತ್ತಿದೆ. ಮಣಿಪಾಲ ಠಾಣೆಯ ಸಿಬ್ಬಂದಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಪಿಎಸ್‌ಐ ಗಾಂಜಾ ಪ್ರಕರಣ ದಾಖಲಿಸುವುದಾಗಿ ಬೆದರಿಸಿದ್ದಾರೆ. ಖಾಕಿ ರೌಡಿಸಂ ಇಲ್ಲಿ ನಡೆಯುವುದಿಲ್ಲ ಎಂದು ಶಾಸಕ ಯಶ್ವಾಲ್ ಸುವರ್ಣ ಎಚ್ಚರಿಕೆ ನೀಡಿದರು.

ರಾಜ್ಯ ಬಜೆಟ್‌ನಲ್ಲಿ ಉಡುಪಿ ಜಿಲ್ಲೆ ಕಡೆಗಣನೆ ಹಾಗೂ ಮಲತಾಯಿ ಧೋರಣೆ ಖಂಡಿಸಿ ಬಿಜೆಪಿ ಉಡುಪಿ ನಗರ ಘಟಕ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆ ಹಾಗೂ ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಯಾರ್ಡ್ ನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

ಈ ಜಿಲ್ಲೆಯ ಜನರು ಬುದ್ದಿವಂತರಾಗಿದ್ದು, ಖಾಕಿಗೆ ಗೌರವ ಕೊಡುತ್ತಾರೆ. ಅಧಿಕಾರಿಗಳು, ಕಾನೂನಿಗೆ ವಿಶೇಷ ಗೌರವವನ್ನು ನೀಡುವವರು ಇದೇ ಜಿಲ್ಲೆಯವರು. ಆದರೆ ಇಲ್ಲಿನ ಜನರ ತಾಳ್ಮೆಯನ್ನು ಪರೀಕ್ಷಿಸುತ್ತಾ, ಸುಖಾ ಸುಮ್ಮನೆ ಅಮಾಯಕರ ಮೇಲೆ ದೌರ್ಜನ್ಯ ಎಸಗಿದರೆ ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಎಂದರು

ಜಿಲ್ಲೆಯಲ್ಲಿ ಐವರು ಶಾಸಕರು ಬಿಜೆಪಿಯವರು ಎಂಬ ಕಾರಣಕ್ಕೆ ಸಿಎಂ ಸಿದ್ದರಾಮಯ್ಯನವರು ಉಡುಪಿಯನ್ನು ಕಡೆಗಣಿಸುತ್ತಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ಯಾವುದೇ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಮುಂದಿನ ಬಜೆಟ್‌ನಲ್ಲಿ ಉಡುಪಿ ಜಿಲ್ಲೆಯನ್ನು ಪರಿಗಣಿಸಿ, ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಬೇಕು. ಇಲ್ಲವಾದಲ್ಲಿ ಉಡುಪಿಗರ ತಾಕತ್ತನ್ನು ಬೆಂಗಳೂರಿನಲ್ಲಿ ಪ್ರದರ್ಶಿಸಲು ಸಿದ್ದರಿದ್ದೇವೆ ಎಂದರು

ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ ಕುಂದಾಪುರ, ಕಾರ್ಕಳ ಶಾಸಕ ವಿ.ಸುನೀಲ್ ಕುಮಾ‌ರ್ ಸಂಸದ ಕೋಟ ಶ್ರೀನಿವಾಸ ಪೂಜಾರಿ  ಮಾತನಾಡಿದರು. ಶಾಸಕರಾದ ಕಿರಣ್ ಕುಮಾರ್ ಕೊಡ್ಲಿ, ಗುರುರಾಜ ಗಂಟಿಹೊಳೆ, ಗುರ್ಮೆ ಸುರೇಶ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ನಗರ ಮಂಡಲ ಅಧ್ಯಕ್ಷ ದಿನೇಶ ಅಮೀನ್, ಮಂಗಳೂರು ವಿಭಾಗ ಪ್ರಮುಖ ಉದಯಕುಮಾರ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಮುಖಂಡರಾದ ದಿನಕರ ಬಾಬು, ದಿನಕರ ಶೆಟ್ಟಿ, ಶಿವಕುಮಾರ ಅಂಬಲಪಾಡಿ, ರೇಷ್ಟ್ರಾ ಶೆಟ್ಟಿ, ಸಂಧ್ಯಾ ರಮೇಶ, ವೀಣಾ ಶೆಟ್ಟಿ, ನಗರಸಭಾ ಸದಸ್ಯ ಗಿರೀಶ ಅಂಚನ್, ರಾಜೀವ ಕುಲಾಲ್, ಸುಪ್ರಸಾದ್ ಶೆಟ್ಟಿ ಬೈಕಾಡಿ ಮತ್ತಿತರರಿದ್ದರು.

 

Related Articles

error: Content is protected !!