ಬೆಂಗಳೂರು ಬಿಜೆಪಿ ಚಿಹ್ನೆಯಲ್ಲಿ ಗೆದ್ದು ಮತ್ತೊಂದು ಪಕ್ಷಕ್ಕೆ ಮತ ಹಾಕಿರುವುದು ಹೆತ್ತ ತಾಯಿಗೆ ದ್ರೋಹ ಬಗೆದಂತೆ ಎಂದು ವಿಧಾನಸಭೆಯ ಪ್ರತಿ ಪಕ್ಷದ ನಾಯಕ ಆರ್.ಅಶೋಕ್ ಅವರು ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಕಿಡಿಕಾರಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಶವಂತಪುರದ ಜನ ಸೋಮಶೇಖರ್‌ರನ್ನು ಬಿಜೆಪಿ ಚಿಹ್ನೆ ಮೇಲೆ ಶಾಸಕನಾಗಿ ಆಯ್ಕೆ ಮಾಡಿದ್ದರು. ಆದರೆ, ಅವರು ಇನ್ನೊಂದು ಪಕ್ಷಕ್ಕೆ ಮತ ಹಾಕಿದ್ದಾರೆ. ಅವರಿಗೆ ಯಶವಂತಪುರ ಕ್ಷೇತ್ರದ ಜನ ಸರಿಯಾದ ಸಂದರ್ಭದಲ್ಲಿ ಸರಿಯಾಗಿ ಉತ್ತರ ಕೊಡುತ್ತಾರೆ ಎಂಬು ವಿಶ್ವಾಸವಿದೆ ಎಂದರು.
ಪಕ್ಷದ ಮತ್ತೊಬ್ಬ ಶಾಸಕ ಹೆಬ್ಬಾರ್ ಕಾಣೆಯಾಗಿದ್ದಾರೆ ಕಳೆದ ನಾಲೈದು ದಿನಗಳಿಂದ ನಿರಂತರ ಸಂಪರ್ಕದಲ್ಲಿದ್ದರು. ಈ ಬಿಜೆಪಿಗೆ ಮತ ಹಾಕುವುದಾಗಿ ಹೇಳಿದ್ದರು. ಆದರೆ, ಕಾಣೆಯಾಗಿದ್ದಾರೆ. ಎಲ್ಲಿದ್ದಾರೆ ಹುಡುಕ ಬೇಕು. ಕಾಣೆಯಾಗಿದ್ದರೋ ಅಥವಾ ಯಾರಾದರೂ ಎತ್ತಿಕೊಂಡು ಹೋಗಿದ್ದಾರೋ ಗೊತ್ತಿಲ್ಲ ಎಂದರು