ಕುಂದಾಪುರ ಕುಂದಾಪುರ ಪುರಸಭಾ ವ್ಯಾಪ್ತಿಯ 23 ವಾರ್ಡ್ ಗಳ ಬಿಜೆಪಿ ಕಾರ್ಯಕರ್ತರ ಸಮಾವೇಶವು ಆದಿತ್ಯವಾರ ಕುಂದಾಪುರದ ವ್ಯಾಸರಾಜ ಕಲ್ಯಾಣ ಮಂಟಪದಲ್ಲಿ ನಡೆಯಿತು
ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಸಜ್ಜನ ವಿಚಾರವಂತ ಜಾತ್ಯಾತೀತ ಸಹನಾಶೀಲ ವ್ಯಕ್ತಿಯಾದ ಕಿರಣ್ ಕೊಡ್ಗಿಯವರು ಕಳೆದ 30 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯಲ್ಲಿ ಕೆಲಸ ಮಾಡಿದ ಅನುಭವಿಯಾಗಿದ್ದಾರೆ ನನ್ನ ಅವಧಿಯಲ್ಲಿ ಬಾಕಿ ಉಳಿದ ಕೆಲಸಗಳನ್ನು ಮುಂದಿನ ದಿನಗಳಲ್ಲಿ ಕೊಡ್ಗಿಯವರು ನೆರವೇರಿಸಿ ಕೊಡುತ್ತಾರೆ ಹಾಗಾಗಿ ಈ ಬಾರಿ ಅವರನ್ನು ಅತ್ಯಂತ ಬಹುಮತ ಮತಗಳಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಬೈಕಾಡಿ ಸುಪ್ರಸಾದ ಶೆಟ್ಟಿಯವರು ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ಯೋಜನೆಗಳನ್ನು ವಿವರಿಸಿದರು ಬಿ ಕಿಶೋರ್ ಕುಮಾರ್ ಮಾತನಾಡಿ ಕಿರಣ್ ಕೊಡ್ಗಿಯವರ 30 ವರ್ಷಗಳ ಕಾಲ ಬಿಜೆಪಿ ಕಾರ್ಯಕರ್ತರೊಂದಿಗಿನ ಒಡನಾಟ ಹಾಗೂ ಕ್ಷೇತ್ರದ ಮತದಾರರೊಂದಿಗಿನ ಭಾಂಧವ್ಯವನ್ನು ವಿವರಿಸಿದರು
ಅಭ್ಯರ್ಥಿ ಕಿರಣ್ ಕೊಡ್ಗಿ ಮಾತನಾಡಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ನಡೆ ನುಡಿ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಅವರ ಮಾರ್ಗದರ್ಶನದಲ್ಲಿಯೇ ಮುಂದುವರಿಸುತ್ತೇನೆ ಎಂದರು ವೇದಿಕೆಯಲ್ಲಿ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್ ಮಂಗಳೂರು ಪ್ರಭಾರಿ ರಾಜೇಶ್ ಕಾವೇರಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಬಿ ಕಿಶೋರ್ ಕುಮಾರ್ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಸುಪ್ರಸಾದ್ ಶೆಟ್ಟಿ ನಗರ ಕಾರ್ಯದರ್ಶಿ ಶಿವ ಮೆಂಡನ್ ಮುಂತಾದವರು ಉಪಸ್ಥಿತರಿದ್ದರು ನಗರ ಅಧ್ಯಕ್ಷ ರಾಜೇಶ್ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷ ಶಂಕರ್ ಅಂಕದಕಟ್ಟೆ ಸ್ವಾಗತಿಸಿದರು