Home » ಬಿಜೆಪಿ ಸೇವಾ ಪಾಕ್ಷಿಕ ಅಭಿಯಾನದ ಪೂರ್ವಭಾವಿ ಸಭೆ
 

ಬಿಜೆಪಿ ಸೇವಾ ಪಾಕ್ಷಿಕ ಅಭಿಯಾನದ ಪೂರ್ವಭಾವಿ ಸಭೆ

by Kundapur Xpress
Spread the love

ಕುಂದಾಪುರ: ಬಿಜೆಪಿ ಕಾರ್ಯಾಲಯದಲ್ಲಿ ಸೇವಾ ಪಾಕ್ಷಿಕ ಅಭಿಯಾನದ ಪೂರ್ವಭಾವಿ ಸಭೆಯು ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರು ಉಪಸ್ಥಿತಿಯಲ್ಲಿ ನಡೆಯಿತು.

ಸೇವಾ ಪಾಕ್ಷಿಕ ಅಭಿಯಾನದ ಸಂಬಂಧ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರ ಜನ್ಮ ದಿನವಾದ ಸೆ.17ರಿಂದ ಪ್ರಾರಂಭವಾಗಿ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಅವರ ಜಯಂತಿಯ ದಿನವಾದ ಅ.2 ರವರೆಗೆ ರಾಷ್ಟ್ರಾದ್ಯಂತ ವಿವಿಧ ಸೇವಾ ಕಾರ್ಯಕ್ರಮಗಳು ನಡೆಯಲಿದ್ದು ಕುಂದಾಪುರ ಮಂಡಲ ವಿವಿಧ ಮೋರ್ಚಗಳಿಗೆ ಹಾಗೂ ಪದಾಧಿಕಾರಿಗಳಿಗೆ ನೀಡಿದ ಸೇವಾ ಪಾಕ್ಷಿಕ ಅಭಿಯಾನದಲ್ಲಿ ತಮ್ಮನ್ನು ತೊಡಗಿಸಿಕೊಂಡು ದೇಶದ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರಿಗೆ 75ನೇ ಹುಟ್ಟು ಹಬ್ಬವನ್ನು ಅರ್ಪಿಸೋಣ ಎಂದು ಸಂಸದರು ಪಕ್ಷದ ಪದಾಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಮಂಡಲದ ಕ್ಷೇತ್ರಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ವಹಿಸಿದರು.ಕಾರ್ಯಕ್ರಮದ ವೇದಿಕೆಯಲ್ಲಿ ಕುಂದಾಪುರ ಮಂಡಲ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ ಸೇವಾ ಪಾಕ್ಷಿಕ ಅಭಿಯಾನದ ಕುಂದಾಪುರ ಮಂಡಲದ ಸಂಚಾಲಕ ಸತೀಶ್ ಪೂಜಾರಿ ವಕ್ವಾಡಿ, ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ ಎಸ್. ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ವಿಜಯ್ ಕುಮಾರ್ ಕೊಡವೂರು,,ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು ಈ ಕಾರ್ಯಕ್ರಮದ ಸಂದರ್ಭದಲ್ಲಿ
ಕುಂದಾಪುರ ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

 

Related Articles

error: Content is protected !!