Home » ಭಾರತ ಅಭಿವೃದ್ಧಿ ಪಥದಲ್ಲಿ ಸಾಗಿದೆ
 

ಭಾರತ ಅಭಿವೃದ್ಧಿ ಪಥದಲ್ಲಿ ಸಾಗಿದೆ

ಕುಯಿಲಾಡಿ ಸುರೇಶ್ ನಾಯಕ್

by Kundapur Xpress
Spread the love

ಉಡುಪಿ : ಪ್ರಧಾನಿ ನರೇಂದ್ರ ಮೋದಿ ಆಳ್ವಿಕೆಗೂ ಮುನ್ನ ಕೇವಲ 5 ಮಹಾನಗರಿ ಗಳಿಗೆ ಸೀಮಿತವಾಗಿದ್ದ ಮೆಟ್ರೋ ಸೇವೆಯನ್ನು ಕಳೆದ 10 ವರ್ಷಗಳಲ್ಲಿ 20 ಮಹಾನಗರಿಗಳಿಗೆ ವಿಸ್ತರಣೆ ಮಾಡಲಾಗಿದೆ. 2014ಕ್ಕೂ ಮುನ್ನವಿದ್ದ 384 ಮೆಡಿಕಲ್ ಕಾಲೇಜುಗಳನ್ನು 700 ಮೆಡಿಕಲ್ ಕಾಲೇಜಿಗೆ ವಿಸ್ತರಣೆಯಾಗಿದೆ. 1.50 ಲಕ್ಷ ಕಿ.ಮೀ. ನಷ್ಟು ರಾಷ್ಟ್ರೀಯ ಹೆದ್ದಾರಿ, 3.20 ಲಕ್ಷ ಕಿ.ಮೀ. ಗ್ರಾಮೀಣ ರಸ್ತೆಯಾ ಗಿದೆ. ಜನರ ಆರ್ಥಿಕ ಪರಿಸ್ಥಿತಿ ಕೂಡಾ ಸುಧಾರಿಸಿದೆ. ಜಗತ್ತು ಭಾರತವನ್ನು ತಿರುಗಿ ನೋಡುತ್ತಿದೆ. ದೇಶದ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಅವರು ಸೋಮವಾರ, ಬಿಜೆಪಿಯ ಕಡಿಯಾಳಿ ಮಾಧ್ಯಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಕ್ತಾರರಾದ ಗೀತಾoಜಲಿ ಎಮ್. ಸುವರ್ಣ, ವಿಜಯ ಕುಮಾರ್ ಉದ್ಯಾವರ, ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಉಪಸ್ಥಿತರಿದ್ದರು

   

Related Articles

error: Content is protected !!