ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಅಮಾಸೆಬೈಲು ಸರಕಾರಿ ಪ್ರೌಢಶಾಲೆಯ ಭೋಜನ ಕಟ್ಟಡವನ್ನ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಉದ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ತಿಮ್ಮಪ್ಪರ ಅವರನ್ನು ಶಾಲಾ ಅಭಿವೃದ್ಧಿ ಸಮಿತಿ, ಗ್ರಾಮಸ್ಥರ ಪರವಾಗಿ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಅಮಾಸೆಬೈಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಕುಲಾಲ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೃಷ್ಣಕುಮಾರ್ ಭಾಗವತ್, ಮಾಜಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸದಾಶಿವ ಶೆಟ್ಟಿ, ಹಳೆಯ ವಿಧ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ಹೆಬ್ಬಾರ್, ಗೀತಾನಂದನ ಫೌಂಡೇಶನ್ ಪ್ರಮುಖ್ ಶಂಕರ್ ಐತಾಳ, ಶಾಲಾ ಮುಖ್ಯೋಪಾಧ್ಯಾಯರಾದ ನಾಗರಾಜ್,ಹಾಗೂ ಶಾಲಾ ಅಧ್ಯಾಪಕ ವೃಂದದವರು, ಗ್ರಾಮ ಪಂಚಾಯಿತಿನ ಸದಸ್ಯರು, ಹಳೆ ವಿದ್ಯಾರ್ಥಿಯ ಸಂಘದ ಸದಸ್ಯರು, ಶಾಲಾ ಅಭಿವೃದ್ದಿ ಸಮಿತಿ ಸದಸ್ಯರು, ಶಾಲಾ ವಿದ್ಯಾರ್ಥಿಗಳು, ಮಕ್ಕಳ ಪೋಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು