ಬೆಂಗಳೂರು : ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು, ಸಿಬಿಐ ಬ್ಲೂಕಾರ್ನರ್ ನೋಟಿಸ್ ನೀಡುವ ಸಾಧ್ಯತೆಯಿದೆ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದ್ದಾರೆ. ಎಸ್ ಐಟಿ ಅಧಿಕಾರಿಗಳ ಜತೆ ಪ್ರಮುಖ ಸಭೆ ನಡೆಸಿದ ಸಿದ್ದರಾಮಯ್ಯ, ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಸೂಕ್ತ ಕ್ರಮಗಳೊಂದಿಗೆ ಬಂಧನಕ್ಕೆ ಮುಂದಾಗುತ್ತೇವೆ ಸಿಬಿಐ ಬ್ಲೂಕಾರ್ನರ್ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದ್ದು, ತನಿಖೆ ಚುರುಕುಗೊಳ್ಳಲಿದೆ ಎಂದು ಅಧಿಕಾರಿಗಳು ಸಿಎಂಗೆ ತಿಳಿಸಿದ್ದಾರೆ ಎಂದು ಅವರ ಕಚೇರಿಯ ಪ್ರಕಟಣೆ ತಿಳಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ದ ಬ್ಲೂ ಕಾರ್ನರ್ ನೋಟಿಸ್ ಕೋರಿ ಭಾರತದಲ್ಲಿನ ಇಂಟರ್ಪೋಲ್ ವಿಷಯಗಳ ನೋಡಲ್ ಸಂಸ್ಥೆಯಾದ ಸಿಬಿಐಗೆ ಎಸ್‌ಐಟಿ ವಿನಂತಿಯನ್ನು ಕಳುಹಿಸಿದೆ ಎಂದು ಮೂಲಗಳು ತಿಳಿಸಿವೆ