ಗಂಗೊಳ್ಳಿ : ಅಲೆಗಳ ಅಬ್ಬರಕ್ಕೆ ಮೀನುಗಾರಿಕಾ ಬೋಟ್ ಮುಳುಗಿದ್ದು 6 ಮೀನುಗಾರರ ರಕ್ಷಣೆ

by Kundapur Xpress
Spread the love

ಕುಂದಾಪುರ: ಉಡುಪಿ ಜಿಲ್ಲೆಯ ಗಂಗೊಳ್ಳಿ ಅಳಿವೆ ಪ್ರದೇಶದಲ್ಲಿ ಅಲೆಗಳ ಅಬ್ಬರಕ್ಕೆ ಸಿಲುಕಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಿದ್ದು, ಬೋಟಿನಲ್ಲಿದ್ದ 6 ಮೀನುಗಾರರನ್ನು ಸಕಾಲಿಕವಾಗಿ ರಕ್ಷಿಸಲಾಗಿದೆ.

ಗಂಗೊಳ್ಳಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್, ಅಳಿವೆ ದಾಟುವಾಗ ಗಾಳಿ ಮತ್ತು ಅಲೆಗಳ ಹೊಡೆತಕ್ಕೆ ಸಿಲುಕಿತು. ಇದರಿಂದ ಬೋಟಿನೊಳಗೆ ನೀರು ನುಗ್ಗಿ ಮುಳುಗಲು ಆರಂಭಿಸಿತು.

ಅಪಾಯದ ಮುನ್ಸೂಚನೆ ಅರಿತ ತಕ್ಷಣ ಸಮೀಪದಲ್ಲಿದ್ದ ಇತರ ಬೋಟ್‌ಗಳ ಮೀನುಗಾರರು ಮತ್ತು ಕರಾವಳಿ ಭದ್ರತಾ ಪಡೆಯ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಹಗ್ಗ ಮತ್ತು ರಕ್ಷಣಾ ಸಾಧನಗಳನ್ನು ಬಳಸಿ ಮುಳುಗುತ್ತಿದ್ದ ಬೋಟಿನಲ್ಲಿದ್ದ ಆರು ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿ ದಡಕ್ಕೆ ಕರೆತರಲಾಯಿತು.

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಬೋಟ್ ಸಂಪೂರ್ಣವಾಗಿ ಮುಳುಗಿದ್ದು, ಬಲೆ ಮತ್ತು ಇತರೆ ಮೀನುಗಾರಿಕಾ ಸಲಕರಣೆಗಳು ಸಮುದ್ರಪಾಲಾಗಿವೆ. ಇದರಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಇತ್ತೀಚೆಗೆ ಗಂಗೊಳ್ಳಿ ಕರಾವಳಿಯಲ್ಲಿ ಅಲೆಗಳ ರಭಸ ಹೆಚ್ಚಾಗಿರುವುದರಿಂದ ‘ಶ್ರೀ ಬಾಲಾಂಜನೇಯ’ ಬೋಟ್ ಮುಳುಗಿ 27 ಮೀನುಗಾರರು ರಕ್ಷಣೆಯಾದ ಘಟನೆಯೂ ನಡೆದಿತ್ತು.

ಮೀನುಗಾರಿಕಾ ಇಲಾಖೆ ಮತ್ತು ಕರಾವಳಿ ಕಾವಲು ಪೊಲೀಸರು ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಹಿನ್ನೆಲೆಯಲ್ಲಿ ಮೀನುಗಾರರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ

 

Related Articles

error: Content is protected !!