ಬೆಂಗಳೂರು : ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಶಂಕಿತ ವ್ಯಕ್ತಿಯ ಬೆನ್ನತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಹಾಗೂ ಸಿಸಿಬಿ ಅಧಿಕಾರಿಗಳಿಗೆ ಈಗ ಆತನ ಚಲನವಲನಗಳ ಸಂಬಂಧ ಮತ್ತಷ್ಟು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ಲಭಿಸಿವೆ.
ಶಂಕಿತ ವ್ಯಕ್ತಿ ಕೆಫೆಯಲ್ಲಿ ಬಾಂಬ್ ಇಟ್ಟ ಬಳಿಕ ಬೆಂಗಳೂರು ನಗರದಲ್ಲಷ್ಟೇ ಅಲ್ಲದೆ ರಾಜ್ಯ, ಹೊರರಾಜ್ಯಗಳ ವಿವಿಧ ಭಾಗಗಳಲ್ಲಿ ಸಂಚರಿಸಿರುವ ಬಗ್ಗೆ ಮಾಹಿತಿ ಲಭಿಸಿದ್ದು, ಪೊಲೀಸರಿಗೆ ದಾರಿ ತಪ್ಪಿಸುವ ಸಲುವಾಗಿ ಕಸರತ್ತು ನಡೆಸಿರುವಸಾಧ್ಯತೆಯಿದೆ.ಇದೀಗ ತನಿಖಾಧಿಕಾರಿಗಳು ಆತಓಡಾಡಿರುವ ದಾರಿಯಲ್ಲಿ ಸಂಚರಿಸಿ ವಿವರ ಸಂಗ್ರಹಿಸುತ್ತಿದ್ದಾರೆ.
ಬಾಂಬ್ ಇಡುವ ಸಲುವಾಗಿ ಮಾ.1ರಂದು ಕುಂದಲಹಳ್ಳಿಯ ಐಟಿಪಿಎಲ್ ರಸ್ತೆಯಲ್ಲಿರುವ ರಾಮೇಶ್ವರಂ ಕೆಫೆಗೆ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುವ ವೇಳೆ ಶಂಕಿತ ವ್ಯಕ್ತಿಯ ದೃಶ್ಯವು ಆ ಬಸ್ಸಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆದರೆ ಆ ಆ ಬಸ್ಸಿನಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿರುವುದನ್ನು ನೋಡಿದ ಕೂಡಲೇ ಭೀತಿಗೊಳ್ಳುವ ಆತ, ತಕ್ಷಣವೇ ಬಸ್ಸಿನಿಂದಿಳಿದು ಬೇರೊಂದು ಬಸ್ ಹತ್ತಿದ್ದಾನೆ ಎನ್ನಲಾಗಿದೆ