ಬೆಂಗಳೂರು : ಇತ್ತೀಚೆಗೆ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟು ಹೋಗಿದ್ದು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮುಸಾಬೀರ್ ಹುಸೇನ್ ಶಾಜಿಟ್ ಎಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಗುರುತಿಸಿರುವುದಾಗಿ ತಿಳಿದು ಬಂದಿದೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೃತ್ಯದ ಹಿಂದೆ ‘ಶಿವಮೊಗ್ಗ ಮಾಡ್ಯುಲ್’ ಕೈವಾಡ ಇರುವುದು ಖಚಿತ ವಾಗಿದೆ. ಮುಸಾಬೀರ್ ಹುಸೇನ್ ಶಾಜಿಬ್ ‘ಮೋಸ್ಟ್ ವಾಂಟೆಡ್’ ಶಂಕಿತ ಉಗ್ರನಾಗಿದ್ದು, ಮೂರು ವರ್ಷಗಳಿಂದ ಆತನ ಪತ್ತೆಗೆ ಎನ್‌ಐಎ ಹುಡುಕಾಟ ನಡೆಸಲಾಗಿದೆ ಅಲ್ಲದೆ 2022ರಿಂದ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ನಡೆದಿರುವ ಭಯೋತ್ಪಾದಕ ಕೃತ್ಯಗಳಲ್ಲಿ ತೀರ್ಥಹಳ್ಳಿ ತಾಲೂಕಿನ ಮತ್ತೊಬ್ಬ ಮೋಸ್ಟ್ ವಾಂಟೆಡ್ ಶಂಕಿತ ಉಗ್ರ ಅಬ್ದುಲ್ ಮತೀನ್ ತಾಹ ಜತೆ ಶಾಜಿಬ್ ಪಾತ್ರ ವಹಿಸಿದ್ದಾನೆ ಎನ್ನಲಾಗಿದೆ