ಬ್ರಹ್ಮಾವರ : ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಬ್ರಹ್ಮಾವರ ತಾಲೂಕು ಆಡಳಿತ ತಾಲೂಕು ಪಂಚಾಯತ್ ಇವರ ಸಹಯೋಗದೊಂದಿಗೆ.ಬ್ರಹ್ಮಾವರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು.
ಕಾರ್ಯಕ್ರಮವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಕಿರಣ್ ಕುಮಾರ್ ಕೊಡ್ಗಿಯವರು ಹಾಗೂ ಉಡುಪಿಯ ಶಾಸಕರಾದ ಶ್ರೀ ಯಶ್ಪಾಲ್ ಸುವರ್ಣರವರು ಜೊತೆಯಾಗಿ ದೀಪ ಬೆಳಗಿಸಿ, ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿದ್ದ ಇಲಾಖೆಗಳ ಅಧಿಕಾರಿಗಳು ಆಯಾಯ ಸಮಸ್ಯೆಗಳನ್ನು ಪರಿಹರಿಸಿದರು. ಜನಸಾಮಾನ್ಯರ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲು ಅಧಿಕಾರಿಗಳು ಆದ್ಯತೆಯ ಮೇರೆಗೆ ಕ್ರಮವಹಿಸುವಂತೆ ಶಾಸಕರು ಹೇಳಿದರು.
ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಸಹಾಯಕ ಆಯುಕ್ತೆ ರಶ್ಮಿ.ಎಸ್.ಆರ್. ಬ್ರಹ್ಮಾವರ ತಹಸೀಲ್ದಾರ್ ಶ್ರೀಕಾಂತ್ ಎಸ್.ಹೆಗ್ಡೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಟಿ. ಸಿದ್ದಲಿಂಗಪ್ಪ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.