Home » ಸ್ವಚ್ಛತಾ ರಾಯಭಾರಿ ನೇಮಕ
 

ಸ್ವಚ್ಛತಾ ರಾಯಭಾರಿ ನೇಮಕ

ಸಾಲಿಗ್ರಾಮ ಪಟ್ಟಣ ಪಂಚಾಯತ್

by Kundapur Xpress
Spread the love

ಕೋಟ : ಸಾಲಿಗ್ರಾಮ ಪಟ್ಟಣ ಪಂಚಾಯತ್ ಸ್ವಚ್ಛ ಭಾರತ್ ಮಿಷನ್, ಸ್ವಚ್ಛ ಸರ್ವೇಕ್ಷಣಕ್ಕೆ ಸಂಬಂಧಿಸಿದಂತೆ ಕೋಟ ವಿವೇಕ ಬಾಲಕಿಯರ ಪ್ರೌಢ ಶಾಲೆ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀಪತಿ ಹೇರ್ಳೆ ಹಾಗೂ ಮಣೂರು ರಾಮ ಪ್ರಸಾದ, ಹಿ.ಪ್ರಾ ಶಾಲೆ ಇದರ ನಿವೃತ್ತ ಮುಖ್ಯ ಶಿಕ್ಷಕ ಗುಂಡ್ಮಿ ರಾಮಚಂದ್ರ ಐತಾಳ್ ಇವರುಗಳನ್ನು ಸಾಲಿಗ್ರಾಮ ಪಟ್ಟಣ ಪಂಚಾಯತ್ ಸ್ವಚ್ಛತಾ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಸ್ವಚ್ಛತೆಯ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸಲಿದ್ದಾರೆ. ಸ್ವಚ್ಛತೆ, ಆರೋಗ್ಯದ ಮಹತ್ವ ಮುಂದಿನ ದಿನಗಳಲ್ಲಿ ಸ್ವಚ್ಛತೆಯ ಬಗ್ಗೆ ಕೈಗೊಳ್ಳಬಹುದಾದ ಉಪಕ್ರಮಗಳ ಬಗ್ಗೆ ವಿಶೇಷ ಉಪನ್ಯಾಸಗಳನ್ನು ಸಮಯ ಸಂದರ್ಭಗಳಲ್ಲಿ ಸಮಯೋಚಿತವಾಗಿ ಉಪನ್ಯಾಸ ನೀಡಲಿದ್ದಾರೆ ಎಂದು ಪಟ್ಟಣ ಪಂಚಾಯತ್ ಪ್ರಕಟಣೆ ತಿಳಿಸಿದೆ.

 

Related Articles

error: Content is protected !!