ಬೆಂಗಳೂರು : ಅಯೋಧ್ಯೆಯಲ್ಲಿ ನಿರ್ಮಿಸಲಾದ ರಾಮಮಂದಿರದಲ್ಲಿ ಬಾಲ ರಾಮನ ಪ್ರಾಣಪ್ರತಿಷ್ಠೆ ನೆರವೇರಿಸಿದ ಬಳಿಕ ಪ್ರಧಾನಿ ಮೋದಿ ದೆಹಲಿಯಲ್ಲಿ ಘೋಷಿಸಿದ್ದ 1 ಕೋಟಿ ಮನೆಗಳಿಗೆ ಸೋಲಾರ್ ಛಾವಣಿ ಅಳವಡಿಸುವ ‘ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ’ಗೆ ಬಜೆಟ್ನಲ್ಲಿ ಬಂಪರ್ ಕೊಡುಗೆ ನೀಡಲಾಗಿದೆ.
ಈ ಯೋಜನೆಯ ಫಲಾನುಭವಿಗಳಿಗೆ ಪ್ರತಿ ತಿಂಗಳು 300 ಯುನಿಟ್ಗಳಷ್ಟು ಉಚಿತ ವಿದ್ಯುತ್ ನೀಡಲಾಗುವುದು. ಜೊತೆಗೆ ಅವರು ಉತ್ಪಾದಿಸಿದ ಹೆಚ್ಚುವರಿ ಸೌರ ವಿದ್ಯುತ್ತನ್ನು ವಿದ್ಯುತ್ ವಿತರಕ ಕಂಪನಿಗಳಿಗೆ ಮಾರಾಟ ಮಾಡಲು ಅವಕಾಶ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ.