ಬೆಂಗಳೂರು : ಲೋಕಸಭೆ ಚುನಾವಣೆಗೆ ಹೋಗುವುದಕ್ಕೂ ಮುನ್ನ ಮಂಡಿಸಿದ ಮಧ್ಯಂತರ ಬಜೆಟ್ನಲ್ಲಿ ಕೇಂದ್ರ ಸರ್ಕಾರ ತೆರಿಗೆದಾರರ ಮೇಲೆ ಯಾವುದೇ ಹೊಸ ಹೊರೆ ಹೇರಿಲ್ಲ. ನೇರ ತೆರಿಗೆ ಮತ್ತು ಪರೋಕ್ಷ ತೆರಿಗೆಯೆರಡರಲ್ಲೂ ಯಾವುದೇ ಬದಲಾವಣೆ ಮಾಡದೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ. ಹೀಗಾಗಿ 2024-2025ನೇ ಸಾಲಿಗೆ ಈ ಹಿಂದಿನ 2023-2024ನೇ ಸಾಲಿನ ಆದಾಯ ತೆರಿಗೆ ಹಾಗೂ ಸರಕು ಮತ್ತು ಸೇವಾ ತೆರಿಗೆ ದರಗಳೇ ಅನ್ವಯಿಸುತ್ತವೆ. *
‘ಬಜೆಟ್ನಲ್ಲಿ ನೇರಮತ್ತು ಪರೋಕ್ಷತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆಮದು ಸುಂಕಗಳಲ್ಲೂ ಯಾವುದೇ ಬದಲಾವಣೆ ಮಾಡಿಲ್ಲ’ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.