ಬೈಂದೂರು : ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ ಇವರು ಬೈಂದೂರು ಕ್ಷೇತ್ರದ ಹಲವು ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕಾಲ ಮಿತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸುವ ಸಲುವಾಗಿ ಉಡುಪಿ ಜಿಲ್ಲಾಧಿಕಾರಿಯವರನ್ನು ಭೇಟಿಯಾಗಿ ಸುಮಾರು ಎರಡು ಗಂಟೆಗಳ ಕಾಲ ಚರ್ಚಿಸಿದ್ದರು. ಇದೀಗ ಮಾನ್ಯ ಶಾಸಕರ ಕೋರಿಕೆಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಸುಮಾರು 24 ಇಲಾಖೆಗಳ ಅಧಿಕಾರಿಗಳ ಸಭೆ ಕರೆದು ಕ್ಷೇತ್ರದ ಸಮಸ್ಯೆಗಳನ್ನು ಚರ್ಚಿಸಿ ಸೂಕ್ತ ಕ್ರಮಕ್ಕೆ ಸೂಚನೆ ನೀಡಿರುತ್ತಾರೆ. ಶಾಸಕರ ಕೋರಿಕೆಗೆ ಸ್ಪಂದಿಸಿದ ಮಾನ್ಯ ಜಿಲ್ಲಾಧಿಕಾರಿಗಳಿಗೆ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿ ಹೊಳೆಯವರು ಧನ್ಯವಾದಗಳನ್ನು ತಿಳಿಸಿದ್ದಾರೆ ಹಾಗೂ ಕ್ಷೇತ್ರದ ವಿವಿಧ ಸಮಸ್ಯಾತ್ಮಕ ವಿಚಾರಗಳು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿನ ಸಮಸ್ಯೆಗಳ ನಿವಾರಣೆ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಶೀಘ್ರ ಹಾಗೂ ಸೂಕ್ತ ಕ್ರಮ ವಹಿಸುವರೆಂದು ಶಾಸಕರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

