Home » ಡಿಸೆಂಬರ್ 27 ರಂದು ಬೈಂದೂರು ತಾಲೂಕು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಉದ್ಘಾಟನೆ : ಸಚಿವರೊಂದಿಗೆ ಚರ್ಚಿಸಿದ ಶಾಸಕ ಗುರುರಾಜ್ ಗಂಟಿಹೊಳೆ
 

ಡಿಸೆಂಬರ್ 27 ರಂದು ಬೈಂದೂರು ತಾಲೂಕು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಉದ್ಘಾಟನೆ : ಸಚಿವರೊಂದಿಗೆ ಚರ್ಚಿಸಿದ ಶಾಸಕ ಗುರುರಾಜ್ ಗಂಟಿಹೊಳೆ

by Kundapur Xpress
Spread the love

ಬೈಂದೂರು : ಅಧಿವೇಶನ ನಿಮಿತ್ತ ಬೆಳಗಾವಿಯಲ್ಲಿರುವ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆಯವರು ಇಂದು ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ಸನ್ಮಾನ್ಯ ಶ್ರೀ ರಾಮ ಲಿಂಗ ರೆಡ್ಡಿಯವರನ್ನು ಭೇಟಿ ಮಾಡಿ ಇಲಾಖೆಗೆ ಸಂಬಂಧಿಸಿದಂತೆ ಕ್ಷೇತ್ರದಲ್ಲಿನ ಸಮಸ್ಯೆಗಳ ಕುರಿತು ಚರ್ಚಿಸಿದರು.ಇದೇ ಸಂದರ್ಭದಲ್ಲಿ ಬೈಂದೂರು ತಾಲೂಕಿನಲ್ಲಿ ನಿರ್ಮಾಣಗೊಂಡಿರುವ ಕೆ.ಎಸ್. ಆರ್.ಟಿ. ಸಿ ಬಸ್ ನಿಲ್ದಾಣ ಕಟ್ಟಡವನ್ನು ಇದೇ ಬರುವ ಡಿಸೆಂಬರ್ 27 ರಂದು ಉದ್ಘಾಟನೆ ಮಾಡುವ ಬಗ್ಗೆ ಚರ್ಚಿಸಿ ಸಚಿವರಿಂದ ದಿನಾಂಕವನ್ನು ಅಂತಿಮ ಪಡಿಸಿದರು. ಮುಂದುವರಿದು ಕ್ಷೇತ್ರದಲ್ಲಿನ ದೇವಸ್ಥಾನ ಹಾಗೂ ದೈವಸ್ಥಾನಗಳಿಂದ ಅಭಿವೃದ್ಧಿ ಕಾಮಗಾರಿ ಬೇಡಿಕೆ ಇರುವ ಕಾರಣ ಅನುದಾನ ಒದಗಿಸಲು ಹಾಗೂ ಕ್ಷೇತ್ರ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಿಗೆ ಹಾಗೂ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಹೆಚ್ಚುವರಿ ಬಸ್ ಸೌಲಭ್ಯ ನೀಡಲು ಮನವಿ ಮಾಡಿದರು

 

Related Articles

error: Content is protected !!