ಬೈಂದೂರು: ನವರಾತ್ರಿಯ ಮೊದಲ ದಿನದ ಶುಭಾವಸರದಲ್ಲಿ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ಸಾರ್ವಜನಿಕರ ಸೇವೆಗಾಗಿ ಬೈಂದೂರಿನಲ್ಲಿ ನೂತನವಾಗಿ ನಿರ್ಮಿಸಿರುವ ಅಗ್ನಿಶಾಮಕ ಠಾಣೆ ಕಟ್ಟಡದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ನಂತರ ಮಾತನಾಡಿದ ಶಾಸಕರು, 2024ರಲ್ಲಿಯೇ ಕಟ್ಟಡ ಕಾಮಗಾರಿ ಪೂರ್ಣಗೊಂಡಿದೆ. ಆದರೆ ಉದ್ಘಾಟನೆಗೆ ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ. ಇದು ಸರಿಯಲ್ಲ. ನೂತನ ಕಟ್ಟಡದಲ್ಲಿಯೇ ಸಾರ್ವಜನಿಕರಿಗೆ ಸೇವೆ ನೀಡಬೇಕು. ಕ್ಷೇತ್ರದ ಜನರ ಅನುಕೂಲಕ್ಕೆ ಹೊಸ ಕಟ್ಟಡ ನಿರ್ಮಾಣ ಆಗಿದೆ. ಹಳೆ ಕಟ್ಟಡವೂ ಸರಿಯಿಲ್ಲ ಮತ್ತು ವ್ಯವಸ್ಥೆಯೂ ಇಲ್ಲಿ ಚೆನ್ನಾಗಿದೆ. ಹೀಗಾಗಿ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು. ಹಳೆಯ ಕಟ್ಟಡದಲ್ಲಿ ಸಿಬ್ಬಂದಿಗಳು ಇರುವ ಬದಲು ಹೊಸ ಕಟ್ಟಡಕ್ಕೆ ವರ್ಗಾವಣೆ ಮಾಡಿ ಉತ್ತಮ ಸೇವೆ ನೀಡಲು ಸಾಧ್ಯ. ಈ ಪ್ರಕ್ರಿಯೆ ಕೂಡಲೇ ಆಗಬೇಕು ಎಂದರು.
ಬಿಜೆಪಿ ಮಂಡಲ ಅಧ್ಯಕ್ಷರಾದ ಅನಿತಾ ಆರ್. ಕೆ., ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುರೇಶ್ ಬಟ್ವಾಡಿ, ಮಂಡಲದ ಪ್ರಧಾನ ಕಾರ್ಯದರ್ಶಿ ಕರುಣ್ ಪೂಜಾರಿ, ಗೋಪಾಲ ವಸ್ರೆ ಉಪಸ್ಥಿತರಿದ್ದರು.

