ಬೈಂದೂರು : ಶಾಸಕರು ಅಧಿಕಾರಿಗಳ ಸಭೆ ಕರೆಯುವ ಅಧಿಕಾರಕ್ಕೆ ಚ್ಯುತಿ ಬಂದಿರುವ ಹಿನ್ನೆಲೆಯಲ್ಲಿ ದಿಢೀರ್ ಧರಣಿ ಕೂರಲು ಮುಂದಾದ ಶಾಸಕ ಗುರುರಾಜ್ ಗಂಟಿಹೊಳೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಾರ್ಯಕರ್ತದಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಿಗದಿಯಾಗಿತ್ತು. ಈ ಸಭೆಗೆ ಅಧಿಕಾರಿಗಳು ಹೋಗದಂತೆ ಮೇಲಾಧಿಕಾರಿಗಳಿಂದ ಸೂಚನೆ ಬಂದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಾರದೆ ಇರುವುದನ್ನು ಖಂಡಿಸಿ ಮತ್ತು ಶಾಸಕರು ಸಭೆ ಕರೆಯುವ ಅಧಿಕಾರವನ್ನು ಮೊಟಕುಗೊಳಿಸುತ್ತಿರುವ ಹಾಗೂ ಅಧಿಕಾರಕ್ಕೆ ಚ್ಯುತಿ ತೋರುತ್ತಿರುವ ಕೃತ್ಯ ಖಂಡಿಸಿ ಶಾಸಕರು ಬೈಂದೂರು ತಹಶೀಲ್ದಾರ್ ಕಚೇರಿ ಎದುರು ಇಂದು ಸಂಜೆ 4.30 ರಿಂದ ಅಹೋರಾತ್ರಿ ಧರಣಿ ನಡೆಸಲಿದ್ದಾರೆಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ