Home » ಕಿಂಡಿ ಅಣೆಕಟ್ಟುಗಳ ಸೂಕ್ತ ನಿರ್ವಹಣೆಗೆ ಶಾಸಕ ಗಂಟಿಹೊಳೆ ಸೂಚನೆ
 

ಕಿಂಡಿ ಅಣೆಕಟ್ಟುಗಳ ಸೂಕ್ತ ನಿರ್ವಹಣೆಗೆ ಶಾಸಕ ಗಂಟಿಹೊಳೆ ಸೂಚನೆ

by Kundapur Xpress
Spread the love

ಬೈಂದೂರು : ತಾಲೂಕು ಕಚೇರಿಯ ಸಭಾಂಗಣದಲ್ಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಿಂಡಿ ಅಣೆಕಟ್ಟು ನಿರ್ವಹಣೆ, ಕುಡಿಯುವ ನೀರು, ಬೀದಿದೀಪ, ತ್ಯಾಜ್ಯ ನಿರ್ವಹಣೆ ಹಾಗೂ ವಸತಿ ಯೋಜನೆ ಗಳ ಪ್ರಗತಿ ಬಗ್ಗೆ ಪಟ್ಟಣ ಪಂಚಾಯತ್ ಅಧಿಕಾರಿಗಳೊಂದಿಗೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಚರ್ಚಿಸಿದರು.

ಕುಡಿಯುವ ನೀರಿನ ಸಮಸ್ಯೆ ಬರಬಹುದಾದ ಪ್ರದೇಶಗಳ ಬಗ್ಗೆ ಮಾಹಿತಿ ಪಡೆದುಕೊಂಡ ಶಾಸಕರು ಬೇಸಿಗೆಯು ಹತ್ತಿರವಿರುವುದರಿಂದ ನೀರಿನ ಸಂರಕ್ಷಣೆ ಹಾಗೂ ಸಮರ್ಪಕ ನಿರ್ವಹಣೆ ಅಗತ್ಯವಿರುವುದರಿಂದ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಎಲ್ಲಾ ಕಿಂಡಿ ಆಣೆಕಟ್ಟುಗಳಿಗೆ ಹಲಗೆ ಹಾಕುವುದು, ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಬರಬಹುದಾದ ಕಡೆಗಳಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಹಾಗೂ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಬೀದಿ ದೀಪಗಳ ಸಮರ್ಪಕ ನಿರ್ವಹಣೆ, ವಸತಿ ಯೋಜನೆಯ ಫಲಾನುಭವಿಗಳಿಗೆ ಸಹಾಯಧನ ಪಾವತಿ, ಹೊಸ ಮನೆ ಬೇಡಿಕೆ ಬಗ್ಗೆ ಪ್ರಸ್ತಾವನೆ ಕಳುಹಿಸುವುದು , ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾಮಗಾರಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿ, ಮುಂದಿನ ದಿನಗಳಲ್ಲಿ ಪಟ್ಟಣ ಪಂಚಾಯತ್ ಗೆ ಸಂಬಂಧಿಸಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ಶಾಸಕರು ತಿಳಿಸಿದರು.

ಸಭೆಯಲ್ಲಿ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ, ಕಂದಾಯ ಅಧಿಕಾರಿಗಳು ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಹಾಗೂ ವಸತಿ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು

 

Related Articles

error: Content is protected !!