ನವದೆಹಲಿ : 2019ರಲ್ಲಿ ಅಂಗೀಕರಿಸಲಾದ ಪೌರತ್ನ ತಿದ್ದುಪಡಿ ಕಾಯ್ದೆಯನ್ನು ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಜಾರಿ ಮಾಡಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಶೀಘ್ರವೇ ನಿಯಮಗಳನ್ನು ಪ್ರಕಟಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾರವರು ಶನಿವಾರ ಹೇಳಿದ್ದಾರೆ.
ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ ಕಿರುಕುಳ ಅನುಭವಿಸಿ ಭಾರತಕ್ಕೆ ಬಂದವರಿಗೆ ಪೌರತ್ವ ನೀಡುವುದಕ್ಕಾಗಿ ಈ ಕಾಯ್ದೆ ರೂಪಿಸಲಾಗಿದೆ ಹೊರತು ಯಾರಿಂದಲೂ ಭಾರತೀಯ ಪೌರತ್ನ ಕಿತ್ತುಕೊಳ್ಳಲು ಅಲ್ಲ’ ಎಂದು ಅವರು ಸ್ಪಷ್ಟಪಡಿಸದರು ಇದೇ ವೇಳೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 370ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದ್ದು, ಎನ್‌ಡಿಎ ಮೈತಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದರು.