ಶಿವಮೊಗ್ಗ : ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ತರೀಕೆರೆಗೆ ಪ್ರಚಾರಕ್ಕೆ ಸಾಗುವ ವೇಳೆ ಸುದ್ದಿಗಾರರ ಜತೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಕೂಡ ಸ್ಥಾಪನೆ ಮಾಡಲಾಗುವುದು. ಪ್ರಕರಣದ ಕುರಿತು ಕೂಲಂಕಷ ತನಿಖೆ ನಡೆಸಲಾಗುವುದು. ಈಗಾಗಲೇ ಸರ್ಕಾರದ ಪರವಾಗಿ ನಮ್ಮ ಸಚಿವರು ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ ಎಂದು ತಿಳಿಸಿದರು.