ಸರಕಾರದ ಫಲಾನುಭವಿಗಳ ಬ್ರಹತ್ ಸಮ್ಮೇಳನ
ಮಂಗಳೂರು :ಇಲ್ಲಿನ ಕರಾವಳಿ ಉತ್ಸವ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಉದ್ಘಾಟಿಸಿ ಮಾತನಾಡಿದರು ಸರಕಾರ ಅಸ್ತಿತ್ವದಲ್ಲಿ ಇರುವುದು ಜನರ ಬದುಕಿನ ಜೀವನಾಡಿಗಳ ಆಧಾರದಲ್ಲಿ ಜನತೆಗೆ ನಂಬಿಕೆ ಬರಬೇಕಾದರೆ ಸರಕಾರ ಉತ್ತರದಾಯಿತ್ವ ನೀಡಬೇಕು ಆಗ ಪ್ರಜಾಪ್ರಭುತ್ವದಲ್ಲಿ ಅಭಿವೃದ್ಧಿ ಸಾಧ್ಯ ಎಂದರು
ಕರಾವಳಿಯಲ್ಲಿ ಶಾಂತಿ ಕದಡಲು ಕಾರಣವಾಗಿದ್ದ ಪಿ ಎಫ್ ಐ ನಂತಹ ಭಯೋತ್ಪಾದಕ ಸಂಘಟನೆಗಳನ್ನು ನಿಷೇಧಿಸಿದ ಧೀಮಂತ ನಾಯಕ ನರೇಂದ್ರ ಮೋದಿಯವರಾಗಿದ್ದು ಅಂತವರ ನೇತೃತ್ವದಲ್ಲಿ ದೇಶದ ಹಿತ ಅಡಗಿದೆ ಎಂದು ಮುಖ್ಯಮಂತ್ರಿ ಹೇಳಿದರು
ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 23 ಲಕ್ಷ ಜನಸಂಖ್ಯೆಯಿದ್ದು ಇದರಲ್ಲಿ 21 ಲಕ್ಷ ಮಂದಿ ಸರಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆದಿದ್ದಾರೆ ಯೋಜನೆಗಳ ಲಾಭ ಪರಿಣಾಮಕಾರಿಯಾಗಿ ಜನರಿಗೆ ತಲುಪುತ್ತಿದೆ ಎಂಬುವುದಕ್ಕೆ ಇದುವೇ ಉದಾಹರಣೆ ಎಂದರು ಇದೇ ಸಂದರ್ಭದಲ್ಲಿ ವಿವಿಧ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಚೆಕ್ ಗಳನ್ನು ಮುಖ್ಯಮಂತ್ರಿ ವಿತರಿಸಿದರು
ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವರದ ಕೋಟ ಶ್ರೀನಿವಾಸ್ ಪೂಜಾರಿ, ಸಹಕಾರ ಸಚಿವರಾದ ಸೋಮಶೇಖರ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಸಂಜೀವ ಮಠಂದೂರು, ಉಮನಾಥ್ ಕೋಟ್ಯಾನ್,ರಾಜೇಶ್ ನಾಯಕ್, ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಮೇಯರ್ ಜಯಾನಂದ ಅಂಚನ್ ಸೇರಿದಂತೆ ಜನಪ್ರತಿನಿಧಿಗಳು ವೇದಿಕೆಯಲ್ಲಿದ್ದರು ಹಿರಿಯ ಪತ್ರಕರ್ತರಾದ ಮನೋಹರ್ ಪ್ರಸಾದ್ ಕಾರ್ಯಕ್ರಮದ ನಿರೂಪಿಸಿದರು