ಬೆಂಗಳೂರು : ಬರುವ ಲೋಕಸಭಾ ಚುನಾವಣೆಗೆ ಎಲ್ಲರ ಅಭಿಪ್ರಾಯ ಪಡೆದು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ ಎಂ ಪಿ ಚುನಾವಣೆಗೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಯಾರಿಗೂ ಟಿಕೆಟ್ ಕೇಳಬೇಡಿ ಎನ್ನಲು ಆಗುವುದಿಲ್ಲ ಆಯಾ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ ಮುಖಂಡರು, ಹಾಲಿ ಮತ್ತು ಮಾಜಿ ಸಚಿವರು, ಶಾಸಕರು, ಸಂಸದರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಟಿಕೆಟ್ ನೀಡಲಾಗುವುದುಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರವೇ ಸಿದ್ಧವಾಗಲಿದೆಅದಕ್ಕಾಗಿ ಸಮೀಕ್ಷೆ ನಡೆಯುತ್ತಿದೆ ಎಂದರು. ಸಚಿವ ಲಕ್ಷ್ಮೀ ಹೆಬ್ಬಾಳ್ಳರ್ ಪುತ್ರನಿಗೆ ಲೋಕಸಭಾ ಚುನಾವಣೆ ಟಿಕೆಟ್ ಕೊಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಓರ್ವ ಆಕಾಂಕ್ಷಿಯಾಗಿ ಟಿಕೆಟ್ ಕೇಳುತ್ತಾರೆ. ಎಲ್ಲರ ಅಭಿಪ್ರಾಯ ಪಡೆದು ಪಟ್ಟಿಯನ್ನು ಅಂತಿಮಗೊಳಿಸಲಾಗುವುದುಎಂದುನುಡಿದರು