ಬೆಂಗಳೂರು: ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರಿಗೆ ಬಿಜೆಪಿಯವರು ಮಾಡಿರುವ ಅವಮಾನದಿಂದ ಆಕ್ರೋಶಗೊಂಡಿದ್ದ ನಾನು ಭಾವುಕನಾಗಿ ಮಾತನಾಡುವಾಗ ಬಾಯ್ತಪ್ಪಿನಿಂದ ಏಕವಚನದಲ್ಲಿ ಸಂಬೋಧಿಸಿದ್ದೇನೆ. ಈ ಪ್ರಮಾದಕ್ಕೆ ವಿಷಾದ ವ್ಯಕ್ತ ಪಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತಮ್ಮ ಹೇಳಿಕೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿರುವ ಅವರು, ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ರಾಷ್ಟ್ರಪತಿಗೆ ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ ಬಿಜೆಪಿ ನಾಯಕರು ಅವಮಾನಿಸಿದ್ದರು. ಅದರಿಂದ ನನಗೆ ತೀವ್ರ ನೋವು ಉಂಟಾಗಿದ್ದಲ್ಲದೆ ಆಕ್ರೋಶ ಹುಟ್ಟಿಸಿತ್ತು. ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ವಿಕವಚನದಲ್ಲಿ ಸಂಬೋಧಿಸಿವೆ. ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಹಿರಿಯರನ್ನು ಕೂಡ ಏಕವಚನದಲ್ಲಿ ಸಂಭೋದಿಸುವುದು ರೂಢಿ ಅವರನ್ನು ಏಕವಚನದಲ್ಲಿ ಸಂಬೋಧಿಸಬಾರದಿತ್ತು ಎಂದಿದ್ದಾರೆ