ದಾವಣಗೆರೆ : ಈ ಹಿಂದೆ ಜನಾರ್ದನ ರೆಡ್ಡಿ, ಶ್ರೀ ರಾಮುಲು ಸದನದಲ್ಲೇ ನನಗೆ ತೊಡೆ ತಟ್ಟಿದ್ದರು. ಬಳಿಕ, ಬೆಂಗಳೂರಿಂದ ಬಳ್ಳಾರಿವರೆಗೆ ಪಾದ ಯಾತ್ರೆ ಮಾಡಿ, ಇಬ್ಬರ ಸೊಕ್ಕನ್ನೂ ಮುರಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಶನಿವಾರ ಕುರುಬ ಸಮಾಜ ಮತ್ತು ಹಿಂದುಳಿದ ವರ್ಗಗಳ ಸಭೆಯಲ್ಲಿ ಮಾತನಾಡಿ, ನನ್ನ ವಿರುದ್ಧ ತೊಡೆ ತಟ್ಟಿದಾಗ ಅಂಥವರ ಜಿಲ್ಲೆವರೆಗೂ ಐತಿಹಾಸಿಕ ಪಾದಯಾತ್ರೆ ಕೈಗೊಂಡು, ಆ ಇಬ್ಬರ ಸೊಕ್ಕು ಮುರಿದಿದ್ದಷ್ಟೇ ಅಲ್ಲ, ಕಾಂಗ್ರೆಸ್ ಅಧಿಕಾರ ಬರಲು ಕಾರಣರಾದೆವು ಎಂದು ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.