ಹುಬ್ಬಳ್ಳಿ : ನಗರದ ಹಿಂದೂ ಬಾಲಕಿ ಮೇಲೆ ಮುಸ್ಲಿಂ ಯುವಕ ಅತ್ಯಾಚಾರ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಒಂದೂವರೆ ತಿಂಗಳಲ್ಲಿ ಧಾರವಾಡ ಜಿಲ್ಲೆಯಲ್ಲಿ ಐದು ಹಾಗೂ ರಾಜ್ಯದ ಹಲವು ಕಡೆ ಇಂತಹ ಅನೇಕ ಪ್ರಕರಣಗಳು ದಾಖಲಾಗಿವೆ. ರಾಜ್ಯ ಸರ್ಕಾರ ಈ ಎಲ್ಲ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್‌ಐಟಿ) `ರಚಿಸಬೇಕು ಎಂದು ಮಾಜಿ ಸಚಿವ ಸಿ.ಟಿ.ರವಿ ಆಗ್ರಹಿಸಿದರು. ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದಾಪುರ, ತಿಪಟೂರಿನಲ್ಲಿ ಒಂದು ತಿಂಗಳ ಹಿಂದೆ ಯುವತಿ ಅಪಹರಣವಾಗಿದ್ದು, ಇನ್ನೂ ಪೊಲೀಸರು ಪ್ರಕರಣ ಬೇಧಿಸಿಲ್ಲಇವೆಲ್ಲ ಪ್ರಕರಣಗಳ ಆರೋಪಿಗಳು ಒಂದೇ ಕೋಮಿಗೆ ಸೇರಿದ್ದಾರೆ. ಲವ್ ಜಿಹಾದ್‌ನ್ನು ಯೋಜನಾ ಬದ್ಧವಾಗಿ ಮಾಡುತ್ತಿದ್ದಾರೆ ಎಂಬುವುದು ಈ ಪ್ರಕರಣಗಳಿಂದ ಗೊತ್ತಾಗುತ್ತಿದೆ ಎಂದು ಆರೋಪಿಸಿದರು.