ಉಡುಪಿ : ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಸಿ ಟಿ ರವಿ ಅವರಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಹುದ್ದೆ ಕೋಕ್ ನೀಡಲಾಗಿದೆ ಎಂದು ತಿಳಿದುಬಂದಿದ್ದು ರವಿ ಅವರ ಸ್ಥಾನಕ್ಕೆ ಸಂಸದ ಬಂಡಿ ಸಂಜಯ್ ಅವರನ್ನು ನೇಮಕ ಮಾಡಲಾಗಿದೆ
ಬಿಜೆಪಿ ಸರಕಾರದ ಅವಧಿಯಲ್ಲಿ ಸಚಿವ ಸ್ಥಾನದಿಂದ ಅವರನ್ನು ಕೆಳಗಿಳಿಸಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಬಿಜೆಪಿ ಹೈಕಮಾಂಡ್ ನೀಡಿತ್ತು ಅಲ್ಲಿಂದ ಇಲ್ಲಿಯವರೆಗೆ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು ಇದೀಗ ಆ ಹುದ್ದೆಯಿಂದ ಅವರಿಗೆ ಕೋಕ್ ನೀಡಲಾಗಿದ್ದು ಇದರ ಬೆನ್ನಲ್ಲೇ ಸಿಟಿ ರವಿ ಅವರಿಗೆ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನ ಸಿಗುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ