209
ಉಡುಪಿ: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿಯಾಗಿ ಮೀನುಗಾರ ಸಮಾಜದ ನಾಯಕ ಪ್ರಮೋದ್ ಮಧ್ವರಾಜ್ ಅವರನ್ನು ಆಯ್ಕೆ ಮಾಡಬೇಕು. ಎಂದು ಅಖಿಲ ಭಾರತೀಯ ಮೀನುಗಾರರ ಸಂಘ ಆಗ್ರಹಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಭಾರತೀಯ ಮೀನುಗಾರರ ಸಂಘದ ಕಾರ್ಯದರ್ಶಿ ಕಿಶೋರ್ ಡಿ. ಸುವರ್ಣ, ಪ್ರಮೋದ್ ಮಧ್ವರಾಜ್ ಉಡುಪಿ ಶಾಸಕರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಸಚಿವರಾಗಿಯೂ ಜಿಲ್ಲೆಯನ್ನು ಅಭಿವೃದ್ಧಿ ಪಡಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ ಎಂದರು.
ಪ್ರಸ್ತುತ ಸಂಸದೆ ಶೋಭಾ ಕರಂದ್ಲಾಜೆ ಅವರು ರಾಜ್ಯ ಮಟ್ಟದ ನಾಯಕರು. ಅವರು ರಾಜ್ಯದ ಯಾವ ಕ್ಷೇತ್ರದಲ್ಲಿಯೂ ಚುನಾವಣೆಗೆ ಸ್ಪರ್ಧಿಸಬಹುದು. ನಾವು ರಾಜ್ಯದಲ್ಲಿ ಒಂದು ಕ್ಷೇತ್ರವನ್ನು ಮಾತ್ರ ಕೇಳುತ್ತಿದ್ದೇವೆ. ಹೀಗಾಗಿ ಶೋಭಾ ಕರಂದ್ಲಾಣಿ ಅವರು ಉಡುಪಿ ಚಿಕ್ಕಮಗಳೂರು ಕ್ಷೇತ್ರವನ್ನು ನಮ್ಮೆಲ್ಲರ ಬೇಡಿಕೆಗೆ ಸ್ಪಂದಿಸಿ ತ್ಯಾಗ ಮಾಡಬೇಕು ಎಂದು ಆಗ್ರಹಿಸಿದರು.

