Home ಕರಾವಳಿ ಸುದ್ದಿಪ್ರಣಾಳಿಕೆ ಸಲಹಾ ಸಂಗ್ರಹ ಅಭಿಯಾನ

ಪ್ರಣಾಳಿಕೆ ಸಲಹಾ ಸಂಗ್ರಹ ಅಭಿಯಾನ

by Kundapur Xpress

ಪ್ರಣಾಳಿಕೆ ಸಲಹಾ ಸಂಗ್ರಹ ಅಭಿಯಾನ ಸಭೆ – ಅನಿವಾಸಿ ಭಾರತೀಯರು ಹಾಗೂ ಪ್ರಬುದ್ಧರ ಗೋಷ್ಠಿ

ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ನೇತೃತ್ವದಲ್ಲಿ ಭಾರತ ಸರಕಾರದ ವಿದೇಶಾಂಗ ವ್ಯವಹಾರಗಳ ಸಚಿವರಾದ ಎಸ್. ಜೈಶಂಕರ್ ಅವರ ಉಪಸ್ಥಿತಿಯಲ್ಲಿ ಇಂದು  ಮಣಿಪಾಲದ ಹೊಟೇಲ್ ಕಂಟ್ರಿ ಇನ್ ಅಂಡ್ ಸೂಟ್ಸ್ ನಲ್ಲಿ ನಡೆದ “ಪ್ರಣಾಳಿಕೆ ಸಲಹಾ ಸಂಗ್ರಹ ಅಭಿಯಾನ ಸಭೆ ಅನಿವಾಸಿ ಭಾರತೀಯರು ಹಾಗೂ ಪ್ರಬುದ್ಧರ ಗೋಷ್ಠಿ”ಯಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ನಯನ ಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ, ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ರಾಜ್ಯ ಚುನಾವಣಾ ಪ್ರಣಾಳಿಕೆ ಸಲಹಾ ಸಂಗ್ರಹ ಅಭಿಯಾನದ ರಾಜ್ಯ ಸಂಚಾಲಕರಾದ ರವೀಂದ್ರ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಉಪಸ್ಥಿತರಿದ್ದರು

Related Articles