Home ಕರಾವಳಿ ಸುದ್ದಿಮೂರ್ಛೆ ಬಂದಂತೆ ನಟಸಿದರೇ ಚೈತ್ರಾ….?

ಮೂರ್ಛೆ ಬಂದಂತೆ ನಟಸಿದರೇ ಚೈತ್ರಾ….?

by Kundapur Xpress

ಉಡುಪಿ :  ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ ಅವರು ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾಗಲೇ ಬಾಯಲ್ಲಿ ನೊರೆ ಬಂದು ಕುಸಿದು ಬಿದ್ದಿದ್ದರು. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ, ಚೈತ್ರಾ ಅವರಿಗೆ ಫೀಡ್ಸ್ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ ಬಟ್ಟೆ ತೊಳೆಯಲು ಕೊಟ್ಟ ಸಾಬೂನಿನ ನೊರೆಯನ್ನು ಬಾಯಿಗೆ ಹಾಕಿರುವ ಶಂಕೆ ವ್ಯಕ್ತವಾದ ಹಿನ್ನೆಲೆ ಸಿಸಿಬಿ ಕಚೇರಿಯಲ್ಲಿರುವ ವಾಶ್ ರೂಮ್ ಅನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ

ಮುನ್ನೆಚ್ಚರಿಕೆ ಸಲುವಾಗಿ ಚೈತ್ರಾ ಕುಂದಾಪುರ ಅವರ ಆರೋಗ್ಯವನ್ನು ಎಲ್ಲಾ ರೀತಿಯಲ್ಲಿ ತಪಾಸಣೆ ನಡೆಸುವಂತೆ ಪೊಲೀಸರು ವೈದ್ಯರಿಗೆ ಮನವಿ ಮಾಡಿದ್ದಾರೆ. ಅದರಂತೆ, ಬಿಪಿ, ಪಲ್ಸ್ ರೇಟ್ ನಾರ್ಮಲ್ ಇದೆ. ಅದರೂ ಮೂರ್ಛೆ ರೋಗಕ್ಕೆ ಸಂಬಂಧಿಸಿದ ತಪಾಸಣೆಗಳು, ಬಿಪಿ, ಹೃದಯ ಸಂಬಂಧಿ ಚೆಕಪ್, ಉಸಿರಾಟದ ಸಮಸ್ಯೆ ಸೇರಿದಂತೆ ಎಲ್ಲ ರೀತಿಯ ಪರೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ

ವೈದ್ಯರ ತಪಾಸಣೆ ವೇಳೆ ಪಿಡ್ಸ್ ಅಥವಾ ಮೂರ್ಛೆ ರೋಗಕ್ಕೆ ಸಂಬಂಧಿಸಿದ ಯಾವುದೇ ಕುರುಹು ಕಂಡು ಬಂದಿಲ್ಲ ಎಂದು ತಿಳಿದುಬಂದಿದೆ. ಸದ್ಯ ಇನ್ನೂ ಕೆಲಕಾಲ ಅಸ್ಪತ್ರೆಯಲ್ಲೆ ಚಿಕಿತ್ಸೆ ಕೊಡಿಸಲು ಸಿಸಿಬಿ ಪೊಲೀಸರು ನಿರ್ಧಾರ ಮಾಡಿದ್ದಾರೆ

Related Articles