ಉಡುಪಿ : ನಿನ್ನೆ ಅಸ್ವಸ್ಥಳಾಗಿ ಆಸ್ಪತ್ರೆ ಸೇರಿದ್ದ ಚೈತ್ರಾ ಕುಂದಾಪುರ ಇದೀಗ ಚೇತರಿಸಿಕೊಂಡಿದ್ದಾಳೆ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂದಿತಳಾಗಿರುವ ಸಾಮಾಜಿಕ ಕಾರ್ಯಕರ್ತೆ ಚೈತ್ರ ಕುಂದಾಪುರ ಕೊನೆಗೂ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಕೆಲವು ವಿಷಯಗಳನ್ನು ಬಾಯಿಬಿಟ್ಟಿದ್ದಾಳೆ ಗೋವಿಂದ ಬಾಬು ಪೂಜಾರಿಯವರಿಂದ ಹಣ ಪಡೆದಿದ್ದಾಗಿ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಚೈತ್ರ ಒಪ್ಪಿಕೊಂಡಿದ್ದಾರೆ ಆದರೆ 5 ಕೋಟಿ ಅಲ್ಲ 3 ಕೋಟಿ ರೂಪಾಯಿ ಪಡೆದಿರುವ ಕುರಿತು ಚೈತ್ರ ಹಾಗೂ ಆಕೆಯ ಸಹಚರ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಸಿಸಿಬಿ ಮೂಲಗಳು ತಿಳಿಸಿದೆ
ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿಯವರನ್ನು ನಂಬಿಸಿ ಅವರಿಂದ ಹಣ ಪಡೆದಿರುವುದಾಗಿ ವಂಚನೆ ಪ್ರಕರಣದ ಆರೋಪಿ ಶ್ರೀಕಾಂತ್ ಒಪ್ಪಿಕೊಂಡಿದ್ದಾನೆ ಗೋವಿಂದಬಾಬು ಪೂಜಾರಿ ಅವರಿಂದ ಹಣ ಪಡೆದು ಬಂದು ಚೈತ್ರ ಹಾಗೂ ಗಗನ್ ಗೆ ನೀಡಿದ್ದೇನೆ ಎಂದು ಹೇಳಿದ್ದಾನೆ ಆದರೆ ಹಣ ಎಲ್ಲಿದೆ ಎಂಬುದು ಗೊತ್ತಿಲ್ಲವೆಂದು ಹೇಳುತ್ತಿದ್ದಾನೆ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ ಈ ಮಧ್ಯೆ ಪ್ರಕರಣದ ಮೂರನೇ ಆರೋಪಿಯಾಗಿರುವ ಅಭಿನವ ಹಾಲಶ್ರೀ ಸ್ವಾಮೀಜಿಯವರ ಬಂಧನಕ್ಕೆ ಸಿಸಿಬಿ ಪೊಲೀಸರು ಬಲೆ ಬೀಸಿದ್ದು ಸ್ವಾಮೀಜಿ ನಿರೀಕ್ಷಣಾ ಜಾಮೀನಿಗಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ ಸ್ವಾಮೀಜಿ ಪರ ವಕೀಲರು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು ಶನಿವಾರ ಅರ್ಜಿ ವಿಚಾರಣೆ ನಡೆಯಲಿದೆ ಎಂದು ಸಿಸಿಬಿ ಮೂಲಗಳು ತಿಳಿಸಿದೆ