ಚಾಮರಾಜನಗರ : ಚಾಮರಾಜನಗರದಲ್ಲಿ ಬೃಹತ್ ರೋಡ್ ಶೋ ಮೂಲಕ ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿ ಶ್ರೀ ಎಸ್ ಬಾಲರಾಜ್ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರು ಭಾಗವಹಿಸಿದರು ಮೋದಿ ಜೀ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಸಂಕಲ್ಪ ತೊಟ್ಟಿರುವ ಚಾಮರಾಜನಗರ ಮಹಾಜನತೆ ಸಹಸ್ರಾರು ಸಂಖ್ಯೆಯಲ್ಲಿ ಸಮಾವೇಶಗೊಂಡು ಲಕ್ಷಾಂತರ ಮತಗಳ ಅಂತರಗಳ ಗೆಲುವಿನ ಶಪಥ ತೊಟ್ಟಿದ್ದಾರೆ ಎಂದು ವಿಜಯೇಂದ್ರ ನುಡಿದರು
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಡಿ ವಿ ಸದಾನಂದ ಗೌಡ ಕೇಂದ್ರ ಸಚಿವರಾದ ನಾರಾಯಣ ಸ್ವಾಮಿ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಅಧ್ಯಕ್ಷರಾದ ಜಿ ಟಿ ದೇವೇಗ್ಮೌಡ ಮಾಜಿ ಸಚಿವರಾದಅರವಿಂದ ರಾಜ್ಯ ಉಪಾಧ್ಯಕ್ಷರಾದ ಶ್ರೀ ಎನ್.ಮಹೇಶ್, ಜಿಲ್ಲಾಧ್ಯಕ್ಷರಾದ ಶ್ರೀ ಸಿ.ಎಸ್. ನಿರಂಜನ್ ಕುಮಾರ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.