Home » ಬೈಕ್‌ ಗೆ ಅಡ್ಡ ಬಂದ ಚಿರತೆ : ಸವಾರ ಗಂಭೀರ
 

ಬೈಕ್‌ ಗೆ ಅಡ್ಡ ಬಂದ ಚಿರತೆ : ಸವಾರ ಗಂಭೀರ

by Kundapur Xpress
Spread the love

ಬ್ರಹ್ಮಾವರ: ಚಿರತೆಯೊಂದು ಚಲಿಸುತ್ತಿದ್ದ ಬೈಕ್‌ಗೆ ಅಡ್ಡ ಬಂದ ಪರಿಣಾಮ ಬೈಕ್ ಸವಾರ ನಂಚಾರ್ ಭಾಸ್ಕ‌ರ್ ಶೆಟ್ಟಿ ನಿಯಂತ್ರಣ ತಪ್ಪಿ ಚಿರತೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು, ಚಿರತೆ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂಚಾರ್ ನಲ್ಲಿ ಸಂಭವಿಸಿದೆ.

ಭಾಸ್ಕರ್ ಶೆಟ್ಟಿ ರಾತ್ರಿ ತನ್ನ ಬೈಕ್ ನಲ್ಲಿ ಮನೆಗೆ ಬರುತ್ತಿದ್ದ ವೇಳೆ ಒಮ್ಮೆಲೇ ಚಿರತೆಯೊಂದು ಅಡ್ಡ ಬಂದ ಪರಿಣಾಮ ನಿಯಂತ್ರಣ ತಪ್ಪಿ ಚಿರತೆಗೆ ಡಿಕ್ಕಿ ಹೊಡೆದು ಬೈಕ್ ಪಲ್ಟಿ ಯಾಗಿದೆ. ಡಿಕ್ಕಿಯ ರಭಸಕ್ಕೆ ಚಿರತೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದು. ಬೈಕ್ ಸವಾರ ಗಂಭೀರ ಗಾಯ ಗೊಂಡಿರುತ್ತಾರೆ. ಅವರನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿರುತ್ತಾರೆ.ಹೆಬ್ರಿ ಅರಣ್ಯ ಇಲಾಖೆಯವರು ಸ್ಥಳಕ್ಕಾಗಮಿಸಿ ಮೃತಪಟ್ಟ ಚಿರತೆಯನ್ನು ಪರಿಶೀಲಿಸಿದ್ದಾರೆ.ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

error: Content is protected !!