207
ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಎರಡನೇ ಬಾರಿಗೆ ಸಿದ್ದರಾಮಯ್ಯ ಹಾಗೂ ಪ್ರಥಮ ಭಾರಿಗೆ ಉಪಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು
ಬೆಂಗಳೂರು ನಗರದ ಕಂಠೀರವ ಸ್ಟೇಡಿಯಂನಲ್ಲಿ ಇಂದು ನಡೆದ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಎಐಸಿಸಿಯ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಹಾಗೂ ಹೊರರಾಜ್ಯಗಳ ಕಾಂಗ್ರೆಸ್ ನಾಯಕರು ಮತ್ತು ಮುಖಂಡರು ಉಪಸ್ಥಿತರಿದ್ದರು
ಸರ್ವರಿಗೂ ಧನ್ಯವಾದಗಳನ್ನು ಅರ್ಪಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇನ್ನು ಕೆಲವೇ ಗಂಟೆಗಳಲ್ಲಿ ಸಚಿವ ಸಂಪುಟದ ಸಭೆ ನಡೆಯಲಿದ್ದು ಇದೇ ಸಭೆಯಲ್ಲಿ ಕಾಂಗ್ರೆಸ್ ಪಕ್ಷ ನೀಡಿದ ಐದು ಗ್ಯಾರಂಟಿಗಳನ್ನು ಅನುಮೋದಿಸಲಾಗುವುದು ಎಂದರು 8 ಸಚಿವರ ಸಚಿವ ಸಂಪುಟವನ್ನು ರಚಿಸಲಾಯಿತು

