ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಮೇರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆರೋಪ ಕೇಳಿಬಂದಿದ್ದು, ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಸದಾಶಿವನಗಗರ ಠಾಣೆ ಪೊಲೀಸರು ಮಾಜಿ ಸಿ.ಎಂ. ಯಡಿಯೂರಪ್ಪ ವಿರುದ್ಧ ಪೋಕ್ಲೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ. ಮತ್ತೊಂದೆಡೆ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಬೇಗೂರು ನಿವಾಸಿ 53 ವರ್ಷದ ಮಹಿಳೆ ನೀಡಿದ ದೂರಿನಲ್ಲಿ ಫೆ.2ರಂದು ಪುತ್ರಿ ಜತೆ ಯಡಿಯೂರಪ್ಪ ಮನೆಗೆ ಹೋಗಿದ್ದೆ ಈ ವೇಳೆ ತನ್ನ ಮಗಳ ಮೇಲೆ ಅತ್ಯಾಚಾರವಾಗಿದೆ. ಈ ಬಗ್ಗೆ ಎಸ್ಐಟಿ ರಚನೆ ಮಾಡಿ ನ್ಯಾಯ ಕೊಡಿಸುವಂತೆ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದೆವು. ಈ ವೇಳೆ ಯಡಿಯೂರಪ್ಪ ತನ್ನ ಅಪ್ರಾಪ್ತ ಪುತ್ರಿಯನ್ನು ಕೋಣೆಯೊಂದಕ್ಕೆ ಕರೆದೊಯ್ದು 5 ನಿಮಿಷಗಳ ಕಾಲ ಮಾತನಾಡಿದ್ದಾರೆ. ಈ ವೇಳೆ ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಸಂತ್ರಸ್ತೆ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.