ನವದೆಹಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಡಿಎಂಕೆ ಸಲ್ಲಿಸಿರುವ ದೂರು ಆಧರಿಸಿ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಿರುದ್ದ ತಕ್ಷಣದ ಮತ್ತು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ. ಈ ಕುರಿತು ಅದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ಸೂಚಿಸಿದೆ. ಅಲ್ಲದೆ ಕ್ರಮ ಕೈಗೊಂಡ ಬಗ್ಗೆ 48 ಗಂಟೆಗಳಲ್ಲಿ ವರದಿ ಸಲ್ಲಿಸುವಂತೆಯೂ ಆದೇಶಿಸಿದೆ