ಉಡುಪಿ : ಹಿರಿಯ ಪತ್ರಕರ್ತ, ದೂರದರ್ಶನ ಉಡುಪಿ ಜಿಲ್ಲಾ ವರದಿಗಾರ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ಅವರು ಹೃದಯಾಘಾತದಿಂದ ಕಲ್ಮಾಡಿಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು.
ಜಯಕರ್ ಸುವರ್ಣ ನಿಧನಕ್ಕೆ ಕರ್ನಾಟಕ ಪ್ರೆಸ್ ಕ್ಲಬ್ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಂಚಾಲಕರಾದ ರೂಪೇಶ್ ಕಲ್ಮಾಡಿ, ಉಡುಪಿ ಜಿಲ್ಲಾಧ್ಯಕ್ಷ ಸುರೇಶ್ ಶೆಟ್ಟಿ ಪ್ರಧಾನ ಕಾರ್ಯದರ್ಶಿ ಮಾಲತಿ ಆಚಾರ್ಯ, ಜೊತೆ ಕಾರ್ಯದರ್ಶಿ ಅನಿಲ್ ಆಳ್ವ ಖಜಾಂಚಿ ರಿತೇಶ್ ಕುಮಾರ್ ಹಾಗೂ ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.