ಮಂಗಳೂರು: ಇಲ್ಲಿನ ಬಿಜೈನಲ್ಲಿ ಬಿಜೈ ವಾರ್ಡ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಶನಿವಾರ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮಾತನಾಡಿ, ಬಿಜೆಪಿ ಆಡಳಿತದಲ್ಲಿ ಕಳೆದು ಹೋಗಿರುವ ಸಾಮರಸ್ಯವನ್ನು ಮತ್ತೊಮ್ಮೆ ಪುನರ್ ಸ್ಥಾಪಿಸುವ ಅಗತ್ಯವಿದೆ. ಇದಕ್ಕೆ ಅನುಗುಣವಾಗಿ ಜಿಲ್ಲೆ ಬೆಳವಣಿಗೆ ಆಗಬೇಕಿದೆ. ಪ್ರವಾಸೋದ್ಯಮ ಅಭಿವೃದ್ಧಿ, ಹೂಡಿಕೆಯಿಂದ ಉದ್ದಿಮೆಗಳ ಸ್ಥಾಪನೆ ಆಗಬೇಕಿದೆ. ಈ ವಿಚಾರಧಾರೆಗಳನ್ನು ಜನರಿಗೆ ತಲುಪಿಸಿ, ಮತ ಕೇಳಬೇಕು. ಈ ಬಾರಿ ಜನರು ಬದಲಾವಣೆ ಬಯಸಿದ್ದಾರೆ. ಆದ್ದರಿಂದ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದರು.
ಮಾಜಿ ಶಾಸಕ ಜೆ.ಆರ್. ಲೋಬೊ ಮಾತನಾಡಿ, ಮನಮೋಹನ್ ಸಿಂಗ್ ಕಾಲದಲ್ಲಿ ಎ.ಪಿ.ಜೆ. ಅಬ್ದುಲ್ ಕಲಾಂ ಹೇಳಿದ್ದರು 2020ರಲ್ಲಿ ಭಾರತ ವಿಶ್ವದಲ್ಲಿ 2ನೇ ಸ್ಥಾನದಲ್ಲಿರಲಿದೆ ಎಂದು. ಆದರೆ ಈಗ 2024 ಆಗದೆ. ಭಾರತ ಆರ್ಥಿಕವಾಗಿ ತುಂಬಾ ಹಿಂದುಳಿದಿದೆ. ಮನಮೋಹನ್ ಸಿಂಗ್ ಅವಧಿಯಲ್ಲಿ ಜಾರಿಗೆ ತರಲು ಉದ್ದೇಶಿಸಿದ್ದ ಎಫ್.ಡಿ.ಐ., ಆಧಾರ್ ಕಾರ್ಡ್ ಮೊದಲಾದ ಯೋಜನೆಗಳನ್ನು ಇದೀಗ ಜಾರಿಗೆ ತರಲಾಗಿದೆ. ಇಂತಹ ಇಬ್ಭಗೆಯ ನೀತಿಯನ್ನು ಇಂದಿನ ಕೇಂದ್ರ ಸರ್ಕಾರ ಹೊಂದಿದೆ. ಇವರ ಮಾತು ಒಂದು, ಕೃತಿ ಇನ್ನೊಂದು ಎಂದರು ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜಾ ಮಾತನಾಡಿದರು.
ಕಾರ್ಪೋರೇಟರ್ ಗಳಾದ ಲ್ಯಾನ್ಸ್ ಲಾಟ್ ಪಿಂಟೋ, ನವೀನ್ ಡಿಸೋಜಾ, ಶಶಿಧರ್ ಹೆಗ್ಡೆ, ಮಾಜಿ ಮೇಯರ್ ಅಶ್ರಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ವಾರ್ಡ್ ಅಧ್ಯಕ್ಷ ವರುಣ್, ಮಹಿಳಾ ಘಟಕ ಅಧ್ಯಕ್ಷೆ ಶಾಲೆಟ್ ಪಿಂಟೊ, ಪ್ರಧಾನ ಕಾರ್ಯದರ್ಶಿ ತನ್ವೀರ್ ಶಾ, ಐಟಿ ಸೆಲ್ ಜಿಲ್ಲಾಧ್ಯಕ್ಷ ಅಲ್’ಸ್ಟನ್ ಡಿ’ಕುನ್ಹಾ, ಲ್ಯಾನ್ಸಿ ಲಾಟ್ ಪಿಂಟೋ, ಮಂಗಳೂರು ಸಿಟಿ ಬ್ಲಾಕ್ ಮಹಿಳಾ ಅಧ್ಯಕ್ಷೆ ರೂಪಾ ಚೇತನ್ ಮೊದಲಾದವರು ಉಪಸ್ಥಿತರಿದ್ದರು.