218
ಕಟ್‍ಬೆಲ್ತೂರು : ಕಾಂಗ್ರೆಸ್ ಕಾರ್ಯಕರ್ತರ ಸಭೆ
ಕುಂದಾಪುರ: ಹೆಮ್ಮಾಡಿ ಸಮೀಪದ ಕಟ್‍ಬೆಲ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಜರುಗಿತು. ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಮಾತನಾಡಿ, ರಾಜ್ಯ ಬಿಜೆಪಿ ಸರಕಾರದ ಆಡಳಿತದಿಂದ ಜನ ರೋಸಿ ಹೋಗಿದ್ದಾರೆ. ಮತದಾರರು ಈ ಬಾರಿ ಕಾಂಗ್ರೆಸ್‍ಗೆ ಬಹುಮತ ನೀಡುವುದು ನಿಶ್ಚಿತ ಎಂದರು. ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್‍ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶರತ್‍ಕುಮಾರ್ ಶೆಟ್ಟಿ ಭದ್ರಮಹಾಕಾಳಿ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಆನಂದ ಶೆಟ್ಟಿ ಕಾಂಗ್ರೆಸ್ ಮುಖಂಡರಾದ ಚಂದ್ರ ನಾಯ್ಕ್, ಶೇಖರ ಬಳೆಗಾರ್, ರವಿ ಮತ್ತಿತರರು ಉಪಸ್ಥಿತರಿದ್ದರು.

