ಬೆಂಗಳೂರು : ಲೋಕಸಭಾ ಚುನಾವಣೆಯ ಟಿಕೆಟ್ಗೆ ಸಂಬಂಧಿಸಿದಂತೆ ಮಾಜಿ ಉಪ ಮುಖ್ಯಮಂತ್ರಿ ಕೆ. ಎಸ್.ಈಶ್ವರಪ್ಪ ಬಳಿಕ ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗ ಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸದಸ್ಯ ಡಿ.ವಿ.ಸದಾ ನಂದಗೌಡರೂ ಅಸಮಾಧಾನ ಗೊಂಡಿದ್ದು, ಮಂಗಳವಾರ ತಮ್ಮ ಮುಂದಿನ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.
‘ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಆ ಪಕ್ಷದ ನಾಯಕರು ನನ್ನನ್ನು ಸಂಪರ್ಕಿಸಿರುವುದು ನಿಜ. ಈ ಬಗ್ಗೆ ಕುಟುಂಬದವರೊಂದಿಗೆ ಚರ್ಚಿಸಿ ಮಂಗಳವಾರ ನನ್ನ ಅಂತರಾಳದ ವಿಚಾರವನ್ನು ತಿಳಿಸುತ್ತೇನೆ’ ಎಂದು ಸದಾನಂದ ಗೌಡರು ತಿಳಿಸಿರುವುದು ಕುತೂಹಲ ಮೂಡಿಸಿದೆ