ಕುಂದಾಪುರ : ಉಡುಪಿ ದ ಕ ಜಿಲ್ಲಾ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನದ ಚುನಾವಣೆಗೆ ಕಾಂಗ್ರೆಸ್ ನಿಂದ ಮಾಜಿ ಜಿ ಪಂ ಸದಸ್ಯ ರಾಜು ಪೂಜಾರಿ ಅವರನ್ನು ಕಣಕ್ಕಿಳಿಸಲಾಗಿದೆ.
ಉಭಯ ಜಿಲ್ಲೆಗಳ ಸ್ಥಳೀಯಾಡಳಿತ ಸಂಸ್ಥೆಗಳ ಸದಸ್ಯರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಲ್ಲವರಿದ್ದಾರೆ ಎಂಬ ಲೆಕ್ಕಾಚಾರದಂತೆ ರಾಜು ಪೂಜಾರಿ ಅವರಿಗೆ ಟಿಕೆಟ್ ನೀಡಲಾಗಿದೆ.
ಬಿಜೆಪಿಯಿಂದ ಬಿಲ್ಲವ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ. ಎಂಬ ವದಂತಿಯ ಹಿನ್ನೆಲೆಯಲ್ಲಿ ಕಾದು ನೋಡುವ ತಂತ್ರ ಅನುಸರಿಸಿದ ಕಾಂಗ್ರೆಸ್, ಬಿಜೆಪಿ ಬಿಲ್ಲವೇತರ ಅಭ್ಯರ್ಥಿಗೆ ನೀಡಿರುವುದರಿಂದ, ಕಾಂಗ್ರೆಸ್ ಬಿಲ್ಲವ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಅಲ್ಲಿಗೆ ಈ ಬಾರಿಯ ಉಡುಪಿ ದಕ ವಿಧಾನಸಭಾ ಚುನಾವಣೆ ಕಣ ಹೆಚ್ಚು ರಂಗೇರಿದೆ
ಇಂದು 12 ಗಂಟೆಗೆ ನಾಮಪತ್ರ ಸಲ್ಲಿಕೆ
ಈ ಉಪ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು ಬೆಳಗ್ಗೆ 11 ಗಂಟೆಗೆ ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಸಭೆ ಸೇರಿ, ಒಟ್ಟಾಗಿ 12 ಗಂಟೆಗೆ ಮಂಗಳೂರು ದ.ಕ. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ರಾಜು ಪೂಜಾರಿ ಅವರ ನಾಮಪತ್ರ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ತಿಳಿಸಿದೆ