ಉಡುಪಿ : ಮುಂಬರುವ ಲೋಕಸಭೆ ಚುನಾವಣೆ ಕಾರ್ಯತಂತ್ರಗಳ ಬಗ್ಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಂಚೂಣಿ ಘಟಕಗಳ ಸಭೆ ಜರುಗಿತು ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ವಹಿಸಿದ್ದರು
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಸಿದ್ದರಾಮಯ್ಯ ಅವರ ಅಧಿಕಾರದ ಅವಧಿಯಲ್ಲಿ ಕರಾವಳಿ ಪ್ರದೇಶಕ್ಕೆ ನೀಡಿರುವ ಕೊಡುಗೆಗಳನ್ನು ಜನರಿಗೆ ಮನವರಿಕೆ ಮಾಡಬೇಕು. ಪಕ್ಷದಲ್ಲಿ ಸಕ್ರಿಯರಲ್ಲದವರನ್ನು ಗುರುತಿಸಿ ಅವರನ್ನು ಕ್ರಿಯಾಶೀಲರನ್ನಾಗಿ ಮಾಡಲು ಮುಖಂಡರು ಮುತುವರ್ಜಿ ವಹಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಳೆಬೈಲ್, ಮುಖಂಡರಾದ ಎಂ.ಎ. ಗಪೂರ್, ಭಾಸ್ಕರ್ ರಾವ್ ಕಿದಿಯೂರು, ಮುರಳಿ ಶೆಟ್ಟಿ ಹಾಗೂ ವಿವಿಧ ಘಟಕಗಳ ಅಧ್ಯಕ್ಷರಾದ ಹರೀಶ್ ಕಿಣಿ, ಅಣ್ಣಯ್ಯ ಸೇರಿಗಾರ್, ಗೀತಾ ವಾಗ್ಗೆ ಶಶಿಧರ್‌ಶೆಟ್ಟಿ ಎಲ್ಲೂರು, ಸೌರಭ್ ಬಲ್ಲಾಳ್, ದೀಪಕ್ ಕೋಟ್ಯಾನ್, ವಿಶ್ವಾಸ್ ಅಮೀನ್, ಹರೀಶ್ ಶೆಟ್ಟಿ ಪಾಂಗಾಳ, ವೈ.ಬಿ. ರಾಘವೆಂದ್ರ, ಇಸ್ಮಾಯಿಲ್ ಆತ್ರಾಡಿ ಉಪಸ್ಥಿತರಿದ್ದರು. ಜಿಲ್ಲಾ ಪ್ರ. ಕಾರ್ಯದರ್ಶಿ ಬಿ. ನರಸಿಂಹಮೂರ್ತಿ ಸ್ವಾಗತಿಸಿದರು

