Home » ರಾಜ್ಯದಲ್ಲಿ ಬದಲಾವಣೆ ಗಾಳಿ
 

ರಾಜ್ಯದಲ್ಲಿ ಬದಲಾವಣೆ ಗಾಳಿ

 ಡಿಕೆ ಶಿವಕುಮಾರ್

by Kundapur Xpress
Spread the love

ಬೈಂದೂರು: ಬಿಜೆಪಿ ಆಡಳಿತದಿಂದ ಜನ ಬೇಸತ್ತಿದ್ದು ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು ಬೈಂದೂರಿನಲ್ಲಿ ಭಾನುವಾರ ಗೋಪಾಲ್ ಪೂಜಾರಿಯವರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಬೆಲೆ ಏರಿಕೆಯಿಂದ ಜನಸಾಮಾನ್ಯರ ಜೀವನ ದುಸ್ತರವಾಗಿದೆ ರಾಜ್ಯದ ಜನರ ಸಂಕಷ್ಟ ಕಾಲದಲ್ಲಿ ಬಿಜೆಪಿ ಸರಕಾರ ಮಾನವೀಯ ನೆಲೆಯಲ್ಲಿಯೂ ಸಹಾಯ ಮಾಡಲಿಲ್ಲ ಯಾವ ಕೆಲಸವಾಗಬೇಕಿದ್ದರೂ  ಲಂಚ ಕೊಡಬೇಕಾಗಿತ್ತು ಎಂದು ಟೀಕಿಸಿದರು

ಕರಾವಳಿ ಅಭಿವೃದ್ಧಿಗೆ ಕಾಂಗ್ರೆಸ್ ವಿಶೇಷವಾಗಿ ಪ್ಯಾಕೇಜ್ ಅನ್ನು ಘೋಷಿಸಿದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರಾವಳಿ ಭಾಗವನ್ನು ಉದ್ಯೋಗ ಸೃಷ್ಟಿಯ ಕೇಂದ್ರವನ್ನಾಗಿಸಿ ಇಲ್ಲಿಯ ಜನರು  ಉದ್ಯೋಗಕ್ಕಾಗಿ ಪರ  ಊರಿಗೆ ಹೋಗದಂತೆ ನೋಡಿಕೊಳ್ಳಲಾಗುವುದು ಸಮಾಜದಲ್ಲಿ ಭಾವನೆಗಳನ್ನೇ ಮುಖ್ಯವಾಗಿಸಿಕೊಂಡು ಮಂಕು ಬೂದಿ ಎರಚುತ್ತಿರುವ ಸರ್ಕಾರವನ್ನು ಈ ಬಾರಿ ಜನ ತಿರಸ್ಕರಿಸಲಿದ್ದಾರೆ ಎಂದು ಡಿಕೆ ಶಿವಕುಮಾರ್ ಅಭಿಪ್ರಾಯ ಪಟ್ಟರು

ರಾಜ್ಯದಲ್ಲಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಸುಭದ್ರ ಸರ್ಕಾರ ನೀಡಲಿದ್ದೇವೆ ಇದಕ್ಕಾಗಿ ಮತದಾರಿಗೆ ಹಲವಾರು ಉಚಿತ ಯೋಜನೆಗಳ ಗ್ಯಾರಂಟಿ ಕಾರ್ಡ್ ನೀಡಿದ್ದೇವೆ ಎಂದರು

ಅಭ್ಯರ್ಥಿ ಗೋಪಾಲ ಪೂಜಾರಿ ಮಾತನಾಡಿದರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮದನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು ಇದೇ ಸಂದರ್ಭದಲ್ಲಿ ಬಿಜೆಪಿಯ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬು ಹೆಗ್ಡೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಂಕರ ಪೂಜಾರಿ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಸದಾಶಿವ ಪಡುವರಿ ಕುಂದಾಪುರ ಎಸಿಎಂಪಿ ಅಧ್ಯಕ್ಷ ವೆಂಕಟ ಪೂಜಾರಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ದೀಪಕ್ ಶೆಟ್ಟಿ ಸಹಿತ ಹಲವು ಬಿಜೆಪಿ ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆಯಾದರು ಡಾ.ಸುಬ್ರಹ್ಮಣ್ಯ ಭಟ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು

   

Related Articles

error: Content is protected !!