ಉಡುಪಿ : ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ಸೂಚಿಸಿದೆ.
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವಿ. ಸುನಿಲ್ ಕುಮಾರ್, ಯಶ್ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯರಾದ ಡಾ! ಧನಂಜಯ ಸರ್ಜಿ, ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ ಸಹಿತ ಪಕ್ಷದ ಮುಖಂಡರು ದೀಮಂತ ನಾಯಕ ಎಸ್.ಎಂ. ಕೃಷ್ಣ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.