Home » ಸಂವಿಧಾನ ದಿನ
 

ಸಂವಿಧಾನ ದಿನ

by Kundapur Xpress
Spread the love

ಕುಂದಾಪುರ : ಭಾರತದಲ್ಲಿ ಸಂವಿಧಾನ ದಿನವನ್ನು ಪ್ರತಿ ವರ್ಷ ನವೆಂಬರ್ ೨೬ ರಂದು ಆಚರಿಸಲಾಗುತ್ತದೆ. ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಅರಿವು ಮೂಡಿಸುವ ಗುರಿಯನ್ನು ಈ ದಿನವು ಹೊಂದಿದೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಈ ದಿನ ಗೌರವ ಸಲ್ಲಿಸಲಾಗುತ್ತದೆ. ಸಂವಿಧಾನದ ಮೌಲ್ಯಗಳನ್ನು ಪಾಲಿಸಿ ದೇಶದ ಹಿತವೇ ಮೊದಲು ಎಂಬ ದೃಷ್ಟಿಯಿಂದ ಉತ್ತಮ ಸಮಾಜ ಕಟ್ಟಲು ಉತ್ತಮ ಪ್ರಜೆಗಳಾಗಿ ಬಾಳೋಣ. ಅಷ್ಟೇ ಅಲ್ಲ ಇದು ನಮ್ಮೆಲ್ಲರ ಹೊಣೆಗಾರಿಕೆ ಎಂದು ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಸಂಧ್ಯಾ ನಾಯಕ ಅಭಿಪ್ರಾಯ ವ್ಯಕ್ತಪಡಿಸಿದರು.
ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿನ ಐಕ್ಯೂಎಸಿ, ಮಾನವಿಕ ವಿಭಾಗ ಮತ್ತು ಚುನಾವಣಾ ಸಾಕ್ಷರತ ಕ್ಲಬ್ ವತಿಯಿಂದ ಕಾರ್ಯಕ್ರಮವನ್ನು ನಡೆಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ಐಕ್ಯೂಎಸಿ ಸಂಚಾಲಕ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ. ಮತ್ತು ವಿದ್ಯಾರ್ಥಿ ಪ್ರತಿನಿಧಿಗಳಾದ ರಕ್ಷಿತಾ ಕೆ., ವಿಕಾಸ ಉಪಸ್ಥಿತರಿದ್ದರು.
ನಾಗಮ್ಮ ಪ್ರಾರ್ಥಿಸಿ, ಡಾ. ಭಾಗೀರಥಿ ನಾಯ್ಕ ಸ್ವಾಗತಿಸಿದರು, ಗಣೇಶ್ ಪೈ ಎಂ. ಪ್ರಾಸ್ತಾವಿಕವಗಿ ಮಾತನಾಡಿ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ರೋಹಿಣಿ ವಂದಿಸಿ, ಕೃತಿಕಾ ನಿರೂಪಿಸಿದರು.

 

Related Articles

error: Content is protected !!