Home » ಕರು ಕಳವು ಪ್ರಕರಣ : ಇಬ್ಬರು ಆರೋಪಿಗಳ ಬಂಧನ
 

ಕರು ಕಳವು ಪ್ರಕರಣ : ಇಬ್ಬರು ಆರೋಪಿಗಳ ಬಂಧನ

by Kundapur Xpress
Spread the love

ಉಡುಪಿ : ಪೆರ್ಡೂರು ಗ್ರಾಮದಲ್ಲಿ ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.

ರಾತ್ರಿ ಸುಮಾರು 10:30 ಗಂಟೆಗೆ ರಾಘವೇಂದ್ರ ಮತ್ತು ಸುಧೀಂದ್ರ ಅವರು ಪೆರ್ಡೂರು ದೇವಸ್ಥಾನದ ಎದುರಿನ ಗದ್ದೆಯಲ್ಲಿದ್ದ ಕರುವನ್ನು ಕಳವು ಮಾಡಿ, ಕಸಾಯಿಖಾನೆಗೆ ಮಾರಾಟ ಮಾಡುವ ಉದ್ದೇಶದಿಂದ ಆಟೋ ರಿಕ್ಷಾದಲ್ಲಿ ಸಾಗಿಸಲು ಯತ್ನಿಸಿದರೆಂದು ಆರೋಪಿಸಲಾಗಿದೆ.

ಈ ಕುರಿತು ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು ಅವರ ನಿರ್ದೇಶನದಂತೆ, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಗೋಪೀಕೃಷ್ಣ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ರಾಘವೇಂದ್ರ (36) ಮತ್ತು ಸುಧೀಂದ್ರ ಶೆಟ್ಟಿ @ ಬಾಬು (36) ಎಂಬಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

 

Related Articles

error: Content is protected !!