Home » ಕ್ರಿಕೆಟ್ ಆಟದ ವೇಳೆ ವಾಗ್ವಾದ ಹಲ್ಲೆಗೆ ತಿರುಗಿದ ಘಟನೆ
 

ಕ್ರಿಕೆಟ್ ಆಟದ ವೇಳೆ ವಾಗ್ವಾದ ಹಲ್ಲೆಗೆ ತಿರುಗಿದ ಘಟನೆ

by Kundapur Xpress
Spread the love

ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಕ್ರಿಕೆಟ್ ಆಟದ ವೇಳೆ ಉಂಟಾದ ವಾಗ್ವಾದ ಹಲ್ಲೆಗೆ ತಿರುಗಿದ ಘಟನೆ ನಡೆದಿದೆ.

ಫೆಬ್ರವರಿ 16, 2026 ರಂದು ಸಂಜೆ ಸುಮಾರು 6:45 ಗಂಟೆಗೆ ಹೊಸೂರು ಗ್ರಾಮದ ಕರ್ಜೆ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಟವಾಡಿ ಮನೆಗೆ ತೆರಳುತ್ತಿದ್ದ ಜೀವನ್ ಶೆಟ್ಟಿ (36) ಅವರನ್ನು ರಮೇಶ್ ಶೆಟ್ಟಿ ಎಂಬವರು ತಡೆದು ನಿಲ್ಲಿಸಿ, ಆಟದ ವೇಳೆ ತೊಂದರೆ ನೀಡಿದ್ದೀಯೆಂದು ಹೇಳಿ ಕ್ರಿಕೆಟ್ ಬ್ಯಾಟ್‌ನಿಂದ ಎಡ ಭುಜ ಮತ್ತು ಬೆನ್ನಿಗೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.

ಇದಷ್ಟೇ ಅಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.

 

Related Articles

error: Content is protected !!