ಕೋಟ: ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಕ್ರೀಡೆ ಮುಖ್ಯವಾಗಿದ್ದು ಸೋಲು ಗೆಲುವಿನ ಕುರಿತು ಚಿಂತಿಸದೆ ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕುಂದಾಪುರ ಸರಕಾರಿ ಪ್ರೌಢಶಾಲೆ ಹೆಸ್ಕುತ್ತೂರು ಇವರ ಸಹಯೋಗದಲ್ಲಿ ಮೈಸೂರು ವಿಭಾಗ ಮಟ್ಟದ 14 ಹಾಗೂ 17 ವಯೋಮಾನದ ಬಾಲಕ ಹಾಗೂ ಬಾಲಕಿಯರ ಕ್ರಿಕೆಟ್ ಪಂದ್ಯಾಟ 2025 ಇದರ ಕ್ರೀಡಾಕೂಟ ಕಾರ್ಯಕ್ರಮವನ್ನ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಶಾರಿರಿಕ ಹಾಗೂ ಮಾನಸಿಕ ವಿಕಸನ ಸಾಧ್ಯ ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕ ಅಧ್ಯಯನಕ್ಕೆ ಮಾತ್ರ ಸೀಮಿತವಾಗಬಾರದು ಕ್ರೀಡೆಯಲ್ಲಿ ಸಾಧನೆ ಮಾಡಬಹುದೆಂದು ಶಾಸಕರು ಹೇಳಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀಮತಿ ಶೋಭಾ ಶೆಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿ,,,ಮೊಳಹಳ್ಳಿ ದಿನೇಶ್ ಹೆಗ್ಡೆ ಉದ್ಯಮಿ, ಜಯಪ್ರಸಾದ್ ಶೆಟ್ಟಿ ದೈಹಿಕ ಶಿಕ್ಷಣ ಶಿಕ್ಷಕರು,,ಅಬ್ದುಲ್ ರವೂಫ,,ಸತ್ಯನಾರಾಯಣ ಜಿ.ತಾಲೂಕು ದೈಹಿಕ ಶಿಕ್ಷಣಾಧಿಕಾರಿಗಳು,,ಚಂದ್ರಶೇಖರ್ ಶೆಟ್ಟಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳು,, ಲೋಕೇಶ್.ಸಿ. ಉಪನಿರ್ದೇಶಕರು (ಆಡಳಿತ) ಹಾಗೂ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು ಶಾಲಾ ಶಿಕ್ಷಣ ಇಲಾಖೆಯ ಎಲ್ಲಾ ಅನುಷ್ಠಾನಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ,, ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು, ಹಾಗೂ ಎಲ್ಲಾ ಶಿಕ್ಷಕ ಸಂಘಟನೆಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು,, ಸರ್ವ ಸದಸ್ಯರು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಸರ್ವ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು,, ಮೈಸೂರು ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾಟ ಶಾಲಾ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗ ಸರಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆ ಹೆಸ್ಕುತ್ತೂರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

